ಪ್ರವಾದಿ ಪೈಗಂಬರ್‌ರನ್ನು ಅವಮಾನಿಸಿದ್ರೆ ಶಿರಚ್ಛೇದ ಬೆದರಿಕೆ: ಸಾಮಾಜಿಕ ಮಾಧ್ಯಮದ ಪ್ರಭಾವಿ, ಸಹಚರನ ಬಂಧನ

ಪ್ರವಾದಿ ಮುಹಮ್ಮದ್ ಪೈಗಂಬರ್ ಅವರನ್ನು ಅವಮಾನಿಸಿದವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕುವ ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ಆತನ ಸಹಚರನನ್ನು ಪೊಲೀಸರು ಇಂದು ಯಾದಗಿರಿ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು
Updated on

ಯಾದಗಿರಿ: ಪ್ರವಾದಿ ಮುಹಮ್ಮದ್ ಪೈಗಂಬರ್ ಅವರನ್ನು ಅವಮಾನಿಸಿದವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕುವ ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ಆತನ ಸಹಚರನನ್ನು ಪೊಲೀಸರು ಇಂದು ಯಾದಗಿರಿ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.

ಬಂಧಿತರನ್ನು ಆಶನಾಳ ಗ್ರಾಮದ ನಿವಾಸಿ 23 ವರ್ಷದ ಅಕ್ಬರ್ ಸೈಯದ್ ಬಹದ್ದೂರ್ ಅಲಿ ಮತ್ತು ಯಾದಗಿರಿ ಸಮೀಪದ ಹತ್ತಿಕುಣಿ ಕ್ರಾಸ್ ನಿವಾಸಿ 21 ವರ್ಷದ ಮೊಹಮ್ಮದ್ ಅಯಾಜ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಯಾದಗಿರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷನ್ 153ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಹಿಂದೂ ಸಂಘಟನೆಗಳು ಮತ್ತು ಕಾರ್ಯಕರ್ತರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದ್ದರು. ಹಿಂದೂ ಜನ ಜಾಗೃತಿ ಸಮಿತಿಯ ಹಿರಿಯ ಮುಖಂಡ ಮೋಹನ್ ಗೌಡ ಕೂಡ ಅಲಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕರೆ ನೀಡಿದ್ದರು.

ಪ್ರವಾದಿ ಮೊಹಮ್ಮದ್‌ಗೆ ಅಗೌರವ ತೋರುವವರ ಶಿರಚ್ಛೇದ ಮಾಡುವಂತೆ ಅಲಿ ತನ್ನ ಸಮುದಾಯದವರನ್ನು ಒತ್ತಾಯಿಸಿದ್ದನು. ದ್ವೇಷದ ಸಂದೇಶಗಳನ್ನು ಹರಡಲು ಅಯಾಜ್ ವೀಡಿಯೊಗಳಲ್ಲಿ ಕಾಣಿಸಿಕೊಂಡಿದ್ದನು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com