ಕರ್ನಾಟಕ-ಮಹಾರಾಷ್ಟ್ರ ನೀರು ವಿನಿಮಯ ಒಪ್ಪಂದಕ್ಕೆ ಮುಂದಾಗಬೇಕು: ಸತೀಶ್ ಜಾರಕಿಹೊಳಿ

ಮಹಾರಾಷ್ಟಕ್ಕೆ ಮಳೆಗಾಲದಲ್ಲಿ ನಾಲ್ಕು ಟಿಎಂಸಿ ನೀಡಿ, ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಮಹಾರಾಷ್ಟ್ರದಿಂದ ನಮ್ಮ ರಾಜ್ಯಕ್ಕೆ ನಾಲ್ಕು ಟಿಎಂಸಿ ನೀರು ವಿನಿಮಯ ಮಾಡಿಕೊಳ್ಳುವ ಒಪ್ಪಂದಕ್ಕೆ ಸರ್ಕಾರ ಮುಂದಾಗಬೇಕು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ಹೇಳಿದ್ದಾರೆ.
ಸತೀಶ್ ಜಾರಕಿಹೊಳಿ.
ಸತೀಶ್ ಜಾರಕಿಹೊಳಿ.

ಬೆಳಗಾವಿ: ಮಹಾರಾಷ್ಟಕ್ಕೆ ಮಳೆಗಾಲದಲ್ಲಿ ನಾಲ್ಕು ಟಿಎಂಸಿ ನೀಡಿ, ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಮಹಾರಾಷ್ಟ್ರದಿಂದ ನಮ್ಮ ರಾಜ್ಯಕ್ಕೆ ನಾಲ್ಕು ಟಿಎಂಸಿ ನೀರು ವಿನಿಮಯ ಮಾಡಿಕೊಳ್ಳುವ ಒಪ್ಪಂದಕ್ಕೆ ಸರ್ಕಾರ ಮುಂದಾಗಬೇಕು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ಹೇಳಿದ್ದಾರೆ.

ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಶುಕ್ರವಾರ ನಡೆದ ಪಶುವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಶಂಕುಸ್ಥಾಪನೆ ಸಮಾರಂಭದಲ್ಲಿ ಸತೀಶ್ ಜಾರಕಿಹೊಳಿ ಅವರು ಮಾತನಾಡಿದರು.

ಮಹಾರಾಷ್ಟ್ರ ರಾಜ್ಯಕ್ಕೆ ಮಳೆಗಾಲದಲ್ಲಿ ನಾಲ್ಕು ಟಿಎಂಸಿ ನೀರು ಬಿಟ್ಟು, ಬೇಸಿಗೆ ಕಾಲದಲ್ಲಿ ಮಹಾರಾಷ್ಟ್ರದಿಂದ 4 ಟಿಎಂಸಿ ನೀರು ಪಡೆಯುವ ಒಪ್ಪಂದಕ್ಕೆ ಸರ್ಕಾರ ಮುಂದಾಗಬೇಕು. ಈ ರೀತಿಯ ಒಪ್ಪಂದದಿಂದ ಸರಕಾರಕ್ಕೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗುವುದಿಲ್ಲ ಎಂದು ಹೇಳಿದರು.

ಅಥಣಿ ಭಾಗದ ನೀರಾವರಿ ಯೋಜನೆಗಳಿಗೆ ಸರಕಾರ ಹೆಚ್ಚಿನ ಅನುದಾನ ನೀಡಲಿದೆ. ಪಶು ವೈದ್ಯಕೀಯ ಮಹಾವಿದ್ಯಾಲಯದಿಂದ ಈ ಭಾಗದ ವಿದ್ಯಾರ್ಥಿಗಳು ಮತ್ತು ಜಾನುವಾರುಗಳನ್ನು ಸಾಕಿಕೊಂಡಿರುವ ರೈತ ಸಮುದಾಯಕ್ಕೆ ಅನುಕೂಲವಾಗಲಿದೆ. ಕಾಲೇಜಿಗೆ ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com