ಸಾಂದರ್ಭಿಕ ಚಿತ್ರ
ರಾಜ್ಯ
ನಂದಿ ಬೆಟ್ಟ ರಸ್ತೆಯಲ್ಲಿ ಪುಂಡರ ಹುಚ್ಚಾಟ: ವೀಲಿಂಗ್ ಹಾವಳಿಗೆ ಬಲಿಯಾಯ್ತ ಒಂದು ಜೀವ?
ದೇವನಹಳ್ಳಿ ತಾಲೂಕಿನ ಕಾರಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದಾಗ ಬೈಕ್ಗಳ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಓರ್ವ ಯುವಕ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ.
ದೇವನಹಳ್ಳಿ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬೈಕ್ ವೀಲಿಂಗ್ ಪುಂಡರ ಹಾವಳಿ ಮೀತಿ ಮೀರಿದ್ದು, ಅಮಾಯಕ ಜೀವಗಳು ಬಲಿಯಾಗುತ್ತಿದೆ.
ದೇವನಹಳ್ಳಿ ತಾಲೂಕಿನ ಕಾರಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದಾಗ ಬೈಕ್ಗಳ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಓರ್ವ ಯುವಕ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ.
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ನಂದಿಬೆಟ್ಟದ ರಸ್ತೆಯಲ್ಲಿ ವೀಲಿಂಗ್ ಪುಂಡರ ಹಾವಳಿ ಹೆಚ್ಚಿದಂತೆ ಕಾಣುತ್ತಿದ್ದು, ವೀಲಿಂಗ್ ಮಾಡಲು ಹೋಗಿಯೇ ಅಪಘಾತವಾಗಿದೆ ಎಂಬ ಆರೋಪ ಕೇಳಿಬಂದಿದೆ.
ಬೆಂಗಳೂರು ಮೂಲದ ಆದಿಲ್ ( 25 ) ಮೃತ ಸವಾರ. ಆತನ ಮೃತದೇಹವನ್ನು ದೇವನಹಳ್ಳಿಯ ಸರ್ಕಾರಿ ಆಸ್ವತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ