ವಿಧಾನಪರಿಷತ್ ಗೆ ಉಮಾಶ್ರೀ, ಸೀತಾರಾಮ್, ಸುಧಾಮ್ ದಾಸ್; ರಾಜ್ಯಪಾಲರಿಗೆ ನಾಮನಿರ್ದೇಶನ ಪಟ್ಟಿ ರವಾನಿಸಿದ ಕಾಂಗ್ರೆಸ್!
ಬೆಂಗಳೂರು: ತೀವ್ರ ವಿರೋಧದ ನಡುವೆಯೂ ವಿಧಾನಪರಿಷತ್ಗೆ ಮೂವರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ.
ನಟಿ, ಮಾಜಿ ಸಚಿವೆ ಉಮಾಶ್ರೀ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು ಇನ್ನು ಕಾಂಗ್ರೆಸ್ ಪಕ್ಷದ ಕೆಲವು ನಾಯಕರ ವಿರೋಧದ ನಡುವೆಯೂ ಎಂಆರ್ ಸೀತಾರಾಮ್ ಹಾಗೂ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್ ಹೆಸರನ್ನೂ ಅಂತಿಮಗೊಳಿಸಿ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ರವಾನಿಸಿದ್ದಾರೆ.
ಕಲಾವಿದರ ಕೋಟಾದಡಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ್ ಹಾಗೂ ಸಮಾಜಸೇವೆ ಹೆಸರಲ್ಲಿ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್ ಅವರಿಗೆ ಸ್ಥಾನ ನೀಡಲಾಗಿದೆ. ನಾಮನಿರ್ದೇಶನ ಕುರಿತು ಸಿದ್ದರಾಮಯ್ಯ ಅವರು ನಿನ್ನೆ ರಾಜ್ಯಪಾಲ ಥಾವರ್ ಚಂದ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.
ಸೀತಾರಾಮ್ ಮತ್ತು ಸುಧಾಮ್ ದಾಸ್ ಆಯ್ಕೆಗೆ ವಿರೋಧ ವ್ಯಕ್ತವಾಗಿದ್ದರಿಂದ ಆಕಾಂಕ್ಷಿಗಳನ್ನು ಸಂಪರ್ಕಿಸಿ ಸಮಾಧಾನ ಪಡಿಸಲು ನಾಯಕರು ಪ್ರಯತ್ತಿದ್ದಾರೆ. ಇನ್ನೊಂದೆಡೆ, ಸೀತಾರಾಮ್, ಸುಧಾಮ್ ದಾಸ್ ನಾಮನಿರ್ದೇಶನ ವಿರೋಧಿಸಿ ರಾಜ್ಯಲಾರಿಗೆ ದೂರು ನೀಡಲಾಗಿದೆ. ಹೀಗಾಗಿ ರಾಜ್ಯಪಾಲರು ಸರ್ಕಾರದಿಂದ ಸ್ಪಷ್ಟನೆ ಕೋರಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ