ನಗರದಲ್ಲಿ ಡ್ರಗ್ಸ್ ಮಾರಾಟ: ವಿದೇಶಿ ಪ್ರಜೆ ಸೇರಿ ಮೂವರ ಬಂಧನ

ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿದ್ದ ವಿದೇಶಿ ಪ್ರಜೆ ಸೇರಿದಂತೆ ಮೂವರು ಆರೋಪಿಗಳನ್ನು ಪ್ರತ್ಯೇತ ಪ್ರಕರಣದಲ್ಲಿ ವಿವಿ ಪುರ ಹಾಗೂ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿದ್ದ ವಿದೇಶಿ ಪ್ರಜೆ ಸೇರಿದಂತೆ ಮೂವರು ಆರೋಪಿಗಳನ್ನು ಪ್ರತ್ಯೇತ ಪ್ರಕರಣದಲ್ಲಿ ವಿವಿ ಪುರ ಹಾಗೂ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.

ರಾಜಸ್ಥಾನ ಮೂಲದ ಚೌಧರಿ, ಓಂ ಸಿಂಗ್ ಹಾಗೂ ನೈಜೀರಿಯಾ ಮೂಲದ ಡೇವಿಡ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ 120 ಗ್ರಾಮ್ ಅಫೀಮು ಹಾಗೂ 101 ಗ್ರಾಮ ಎಡಿಎಂಎ ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಯಶವಂಪುರ ಸಮೀಪದ ಮತ್ತಿಕೆರೆಯಲ್ಲಿ ನೆಲೆಸಿದ್ದರು. ತಮ್ಮ ಊರಿನಿಂದ ಕಡಿಮೆ ಬೆಲೆಗೆ ಅಫೀಮು ತಂದು ನಗರದಲ್ಲಿ ದುಬಾರಿ ಬೆಲೆಗೆ ರಾಜಸ್ಥಾನ ಮೂಲದ ಗ್ರಾಹಕರಿಗೆ ಮಾತ್ರವೇ ಮಾರಾಟ ಮಾಡುತ್ತಿದ್ದರು, ಖಚಿತ ಮಾಹಿತಿ ಸಂಗ್ರಹಿಸಿ ಪ್ರೇಮ್ ನಗರದ ಸಮೀಪ ಗ್ರಾಹಕನಿಗೆ ಅಫೀಮು ನೀಡಲು ಬಂದಾಗ ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ನಗರದಲ್ಲಿ ಡ್ರಗ್ಸ್ ದಂಧೆಯಲ್ಲಿ ನಿರತನಾಗಿದ್ದ ನೈಜೀರಿಯಾ ಪ್ರಜೆ ಪಾರ್ಟಿಗಳು ಹಾಗೂ ಇತರೆ ಕಾರ್ಯಕ್ರಮಗಳಿಗೆ ಹೋಗಿ ಅಲ್ಲಿ ಸಾಫ್ಟ್‌ವೇರ್ ಎಂಜಿನಿಯರ್‌ಗಳು ಮತ್ತು ವಿದ್ಯಾರ್ಥಿಗಳಿಗೆ ಅಗ್ಗದ ಬೆಲೆಗೆ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಆರೋಪಿಯನ್ನು ವಿವಿ ಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com