ಡಿಸೆಂಬರ್ ವೇಳೆಗೆ ಹಾಸನ ವಿಮಾನ ನಿಲ್ದಾಣ ಸಿದ್ಧವಾಗಲಿದೆ: ಕೆಎನ್ ರಾಜಣ್ಣ
ಬಹು ನಿರೀಕ್ಷಿತ ಭುವನಹಳ್ಳಿ ಸಮೀಪದ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಇದೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ ಮಂಗಳವಾರ ಹೇಳಿದರು.
Published: 16th August 2023 07:45 AM | Last Updated: 16th August 2023 07:35 PM | A+A A-

ಕೆಎನ್ ರಾಜಣ್ಣ
ಹಾಸನ: ಬಹು ನಿರೀಕ್ಷಿತ ಭುವನಹಳ್ಳಿ ಸಮೀಪದ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಇದೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ ಮಂಗಳವಾರ ಹೇಳಿದರು.
77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಮೂರು ವರ್ಷಗಳ ಹಿಂದೆ ಪ್ರಾರಂಭವಾದ 200 ಕೋಟಿ ರೂ. ಗಳ ಯೋಜನೆಯಲ್ಲಿ ರನ್‌ವೇ ಸೇರಿದಂತೆ ಶೇ 70ರಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಹೇಳಿದರು.
ಚಾಲ್ತಿಯಲ್ಲಿರುವ ಯೋಜನೆಗಳನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಮತ್ತು ಖಾತರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದರು.
ಇದನ್ನೂ ಓದಿ: ರಾಜ್ಯ ವಿಮಾನ ನಿಲ್ದಾಣ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರ ಮುಂದು!
'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 27ರಂದು ಗೃಹ ಲಕ್ಷ್ಮಿ ಖಾತರಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ 5 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ' ಎಂದು ಅವರು ಹೇಳಿದರು.
ಸಾಮಾಜಿಕ ನ್ಯಾಯದ ಮೂಲಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಹಾಗೂ ದೀನದಲಿತರ ಉನ್ನತಿಗೆ ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ಸಿ ಸತ್ಯಬಾಮಾ, ಜಿಪಂ ಸಿಇಒ ಪೂರ್ಣಿಮಾ, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಉಪಸ್ಥಿತರಿದ್ದರು.