ರಾಜ್ಯದಲ್ಲಿ ಶೇ.14ರಷ್ಟು ಮಳೆ ಕೊರತೆ, ಸೆಪ್ಟೆಂಬರ್ 1-7ರವರೆಗೆ ಸಾಮಾನ್ಯ ಮಳೆ ಸಾಧ್ಯತೆ: ಐಎಂಡಿ

ವಾಡಿಕೆಯಂತೆ ಆಗಸ್ಟ್‌ ತಿಂಗಳಿನಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಬೇಕಿತ್ತು. ಆದರೆ, ಈ ಬಾರಿ ಮಳೆಯ ಕೊರತೆ ಎದ್ದು ಕಾಣುತ್ತಿದ್ದು, ಪರಿಣಾಮ ಶೇ.14ರಷ್ಟು ಮಳೆ ಕೊರತೆಯಾಗಿದೆ. ಆದರೆ, ಸೆಪ್ಟೆಂಬರ್ 1-7ರವರೆಗೆ ರಾಜ್ಯದಾದ್ಯಂತ ಸಾಮಾನ್ಯ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವಾಡಿಕೆಯಂತೆ ಆಗಸ್ಟ್‌ ತಿಂಗಳಿನಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಬೇಕಿತ್ತು. ಆದರೆ, ಈ ಬಾರಿ ಮಳೆಯ ಕೊರತೆ ಎದ್ದು ಕಾಣುತ್ತಿದ್ದು, ಪರಿಣಾಮ ಶೇ.14ರಷ್ಟು ಮಳೆ ಕೊರತೆಯಾಗಿದೆ. ಆದರೆ, ಸೆಪ್ಟೆಂಬರ್ 1-7ರವರೆಗೆ ರಾಜ್ಯದಾದ್ಯಂತ ಸಾಮಾನ್ಯ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಆಂತರಿಕ ಪ್ರದೇಶದಲ್ಲಿ ಕ್ರಮವಾಗಿ ಶೇ.11 ಮತ್ತು ಶೇ.23ರಷ್ಟು ಮಳೆ ಕೊರತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಾಡಿಕೆಯಂತೆ ಜೂನ್‌ನಿಂದ ಇಲ್ಲಿಯವರೆಗೆ 57.3 ಸೆಂ.ಮೀ ಮಳೆಯಾಗಬೇಕಿತ್ತು. ಆದರೆ. 49.6 ಸೆಂ.ಮೀನಷ್ಟು ಮಳೆಯಾಗಿದೆ. ಇದರಂತೆ ಶೇ.14ರಷ್ಟು ಮಳೆ ಕೊರತೆಯಾಗಿದೆ ಎಂದು  ಬೆಂಗಳೂರಿನ ಐಎಂಡಿ ಅಧಿಕಾರಿ ಎ ಪ್ರಸಾದ್ ಅವರು ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್ 1 ರಿಂದ 7 ರವರೆಗೆ ರಾಜ್ಯದಾದ್ಯಂತ ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದ್ದು, ಇದರಿಂದ ರಾಜ್ಯದಲ್ಲಿ 5 ಎಂಎಂ ನಿಂದ 10 ಮಿಮೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಉತ್ತರ ಒಳನಾಡಿನಲ್ಲಿ ಈ ಬಾರಿ ಸಾಮಾನ್ಯ ಮಳೆಯಾಗಿದ್ದು, ವಾಡಿಕೆಯಂತೆ 28.2 ಸೆ.ಮೀ.ಮಳೆಯಾಗಿದೆ. ಕರಾವಳಿ ಭಾಗದಲ್ಲಿ 249 ಪೈಕಿ 216.ಸೆ.ಮೀ ಮಳೆಯಾಗಿದೆ. ಅದೇ ರೀತಿ ದಕ್ಷಿಣ ಒಳನಾಡಿನಲ್ಲಿ 44.8 ಸೆಂ.ಮೀ ಪೈಕಿ 34.6 ಸೆಂ.ಮೀನಷ್ಟು ಮಳೆಯಾಗಿದ್ದು. ಒಟ್ಟು ಶೇ.46ರಷ್ಟು ಮಳೆ ಕೊರತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com