
ಕಾಗೋಡು ತಿಮ್ಮಪ್ಪ
ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಈ ಬಾರಿಯ ಡಿ. ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಹಿತಿ ಹಿ.ಶಿ. ರಾಮಚಂದ್ರೇಗೌಡ ಅವರ ನೇತೃತ್ವದ ಆಯ್ಕೆ ಸಮಿತಿಯು ಕಾಗೋಡು ತಿಮ್ಮಪ್ಪ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಗಿ ತಿಳಿಸಿದ್ದಾರೆ.
ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಆ.20ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಗೋಡು ತಿಮ್ಮಪ್ಪ ಅವರಿಗ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಗೋಡು ತಿಮ್ಮಪ್ಪ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ದೇವರಾಜ ಅರಸು ಅವರ ಗರಡಿಯಲ್ಲಿಯೇ ಬೆಳೆದಿರುವ ತಿಮ್ಮಪ್ಪನವರು ಭೂ ಸುಧಾರಣಾ ಕಾಯ್ದೆಯಷ್ಟೇ ಕ್ರಾಂತಿಕಾರಿಯಾದ "ವಾಸಿಸುವವನನ್ನೇ ಮನೆ ಒಡೆಯ" ನನ್ನಾಗಿ ಮಾಡುವ ಕ್ರಾಂತಿಕಾರಿ ಕಾಯ್ದೆಯ ರೂವಾರಿ ಎಂದಿದ್ದಾರೆ.
ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿರುವ ಹಿರಿಯರಾದ ಕಾಗೋಡು ತಿಮ್ಮಪ್ಪನವರಿಗೆ ಹಾರ್ದಿಕ ಅಭಿನಂದನೆಗಳು.
— CM of Karnataka (@CMofKarnataka) August 17, 2023
ಸಮಾಜವಾದಿ ಸಿದ್ಧಾಂತಕ್ಕೆ ತನ್ನನ್ನು ಅರ್ಪಿಸಿಕೊಂಡಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು, ಉಳುವವನನ್ನೇ ಭೂಮಿಯ ಒಡೆಯನಾಗಿ ಮಾಡುವ ಭೂ ಹೋರಾಟದ ಮೂಲಕವೇ ರಾಜಕೀಯ ಜೀವನ ಪ್ರವೇಶಿಸಿದವರು.
ದೇವರಾಜ ಅರಸು ಅವರ… pic.twitter.com/k1Ed0BQc7M