ಬೆಂಗಳೂರು: ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

ರಾಜಧಾನಿ ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ (KSR) ನಿಂತಿದ್ದ ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ (Udyan Express Train) ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಹೊಗೆ ಆವರಿಸಿರುವುದು, ಅಗ್ನಿಶಾಮಕ ದಳ ಸಿಬ್ಬಂದಿಯಿಂದ ನಂದಿಸುವ ಕಾರ್ಯ
ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಹೊಗೆ ಆವರಿಸಿರುವುದು, ಅಗ್ನಿಶಾಮಕ ದಳ ಸಿಬ್ಬಂದಿಯಿಂದ ನಂದಿಸುವ ಕಾರ್ಯ
Updated on

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ (KSR) ನಿಂತಿದ್ದ ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ (Udyan Express Train) ಭಾರೀ ಅಗ್ನಿ ಅವಘಡ ಸಂಭವಿಸಿದೆ. ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ರೈಲಿನ ಎರಡು ಕೋಚ್​​​ಗಳಿಗೆ ಆವರಿಸಿದೆ. 

ರೈಲು ಸಂಖ್ಯೆ 11301 ಉದ್ಯಾನ್ ಎಕ್ಸ್‌ಪ್ರೆಸ್ ಪ್ಲಾಟ್‌ಫಾರ್ಮ್ ಸಂಖ್ಯೆ 3 ರಲ್ಲಿ 05.45 ಗಂಟೆಗೆ ಸಂಗೊಳ್ಳಿ ರಾಯಣ್ಣ ಬಸ್ ನಿಲ್ದಾಣಕ್ಕೆ ಬಂದು ನಿಲ್ಲಿಸಿತು. ಸುಮಾರು 07.10ಗಂಟೆಗೆ ರೈಲಿನ ಬಿ1 ಮತ್ತು ಬಿ2 ಬೋಗಿಗಳಲ್ಲಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಅಗ್ನಿಶಾಮಕ ದಳಕ್ಕೆ ಸಂದೇಶ ನೀಡಲಾಗಿದೆ. ಬೆಳಗ್ಗೆ 7.35ಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿತು.

ಈ ವೇಳೆ ರೈಲಿನೊಳಗೆ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಸುತ್ತಮುತ್ತಲ ರೈಲುಗಳಿಗೂ ಯಾವುದೇ ಹಾನಿಯುಂಟಾಗಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಿಢೀರ್​​ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ. ರೈಲ್ವೆ ನಿಲ್ದಾಣ , ಮೆಜೆಸ್ಟಿಕ್ ಬಸ್ ನಿಲ್ದಾಣದವರೆಗೆ ಹೊಗೆ ಆವರಿಸಿದೆ. ರೈಲು ಬೆಳಗ್ಗೆ 6 ಗಂಟೆಗೆ ಕೆಎಸ್​ಆರ್​​ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಬೆಳಗ್ಗೆ 7.30 ಕ್ಕೆ ಬೆಂಕಿ ಹೊತ್ತಿಕೊಂಡಿದೆ. ಸದ್ಯ ಬೆಂಕಿ ತಗುಲಿದ ಬೋಗಿಯಿಂದ ಉಳಿದ ಬೋಗಿಗಳನ್ನು ಬೇರ್ಪಡಿಸಲಾಗಿದೆ. ಅದೃಷ್ಟವಶಾವತ್​  ಯಾವುದೇ ಪ್ರಯಾಣಿಕರು ರೈಲಿನಲ್ಲಿ ಇರಲಿಲ್ಲ.

ತನಿಖೆ ಬಳಿಕ ಘಟನೆಗೆ ಕಾರಣ ಏನು ಎಂಬುವುದು ಗೊತ್ತಾಗಲಿದೆ, ಪ್ರಾಥಮಿಕ ಮಾಹಿತಿ ಪ್ರಕಾರ ತಾಂತ್ರಿಕ ದೋಷವೇ ಬೆಂಕಿ ಅನಾಹುತಕ್ಕೆ ಕಾಕಣ ಎಂದು ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ ಸೌಮ್ಯಲತಾ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com