
ಇಂದಿರಾ ಕ್ಯಾಂಟೀನ್
ಬೆಂಗಳೂರು: ಇಂದಿರಾ ಕ್ಯಾಂಟೀನ್ ಊಟದ ಬೆಲೆಯಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ಕಾನೂನು ಸಚಿವ ಹೆಚ್ ಕೆ ಪಾಟೀಲ್ ಹಾಗೂ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಇಂದಿರಾ ಕ್ಯಾಂಟೀನ್ ದರ ಬಿಬಿಎಂಪಿ ವ್ಯಾಪ್ತಿಯಲ್ಲಿರುವಂತೆಯೇ ಯಥಾ ಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ.
ಇದನ್ನೂ ಓದಿ: ಇಂದಿರಾ ಕ್ಯಾಂಟೀನ್ ಊಟದ ದರ ಹೆಚ್ಚಿಸಲು ಸಚಿವ ಸಂಪುಟ ಒಪ್ಪಿಗೆ
"ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಇಂದಿರಾ ಕ್ಯಾಂಟೀನ್ ಗೆ ಆಹಾರ ಸರಬರಾಜುದಾರರಿಗೆ ಸರ್ಕಾರ ನೀಡುವ ದರ 5ರೂ ಹೆಚ್ಚಳವಾಗಿದೆ ಅಷ್ಟೆ. ಈ ಮೊದಲು ಆಹಾರ ಸರಬರಾಜುದಾರರಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ತಲಾ 57 ರೂ ನೀಡಲಾಗುತ್ತಿತ್ತು. ಈಗ ಅದನ್ನು 62 ರೂಗೆ ಹೆಚ್ಚಿಸಲಾಗಿದೆ. ಆಹಾರ ಮೆನು ಬದಲಾವಣೆಯೊಂದಿಗೆ ಈ ಹೆಚ್ಚಳ ಮಾಡಲಾಗಿದೆಯೇ ಹೊರತು ಗ್ರಾಹಕರಿಗೆ ಹಳೆದ ದರದಲ್ಲೇ ಹೊಸ ಮೆನು ಮತ್ತು ಇನ್ನಷ್ಟು ಉತ್ತಮ ಆಹಾರ ದೊರಕಲಿದೆ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್ನಲ್ಲಿ ಬಡವರಿಗೆ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಸಚಿವ ಸಂಪುಟ ಸಭೆ ಶನಿವಾರ ಒಪ್ಪಿಗೆ ನೀಡಿದೆ ಎಂದು ಈ ಹಿಂದೆ ವರದಿ ಪ್ರಕಟವಾಗಿತ್ತು.