ಶಿಕ್ಷಕರ ನೇಮಕಕ್ಕೆ ನ್ಯಾಯಾಲಯದ ಅನುಮತಿ ಪಡೆಯುತ್ತೇವೆ: ಸಚಿವ ಮಧು ಬಂಗಾರಪ್ಪ
ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ಕೋರಿ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿದ್ದಾರೆ.
Published: 20th August 2023 11:07 AM | Last Updated: 20th August 2023 11:13 AM | A+A A-

ಮಧು ಬಂಗಾರಪ್ಪ
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ಕೋರಿ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಯ್ಕೆಯಾದ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡದೆ ಕೇವಲ ಪ್ರಕ್ರಿಯೆ ನಡೆಸಿ ಎಂದು ಹೈಕೋರ್ಟ್ ಹೇಳಿದ್ದು, ಅದನ್ನೇ ಅನುಸರಿಸುತ್ತಿದ್ದೇವೆ. ಆದರೆ, ಶಿಕ್ಷಕರ ನೇಮಕಾತಿಗೆ ಅನುಮತಿ ಕೋರಿ ನ್ಯಾಯಾಲಯದ ಮುಂದೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದರು.
ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸದ್ಯ ಸರ್ಕಾರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂದು ಸಚಿವರು ಹೇಳಿದರು.
'ಖಾಲಿ ಹುದ್ದೆಗಳ ಹೊರತಾಗಿ, ವರ್ಗಾವಣೆ ಪ್ರಕ್ರಿಯೆಯ ನಂತರ ಕೆಲವು ಖಾಲಿ ಹುದ್ದೆಗಳು ಸೃಷ್ಟಿಯಾಗಿವೆ. ಹೀಗಾಗಿ ಅತಿಥಿ ಶಿಕ್ಷಕರ ನೇಮಕಕ್ಕೆ ಕ್ರಮಕೈಗೊಳ್ಳುತ್ತಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ: ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ಯೋಜನೆಗೆ ಚಾಲನೆ
ಖಾಸಗಿಯವರ ನೆರವಿನೊಂದಿಗೆ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಸರ್ಕಾರದ ಯೋಜನೆಗೆ ಹಲವರ ವಿರೋಧಕ್ಕೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಹಸ್ತಾಂತರಿಸಲಾಗುವುದು ಎಂದು ನಾವು ಎಲ್ಲಿಯೂ ಹೇಳಿಲ್ಲ. ಈ ವಿಚಾರದಲ್ಲಿ ಬಿಜೆಪಿಯವರು ವಿವಾದ ಸೃಷ್ಟಿಸುತ್ತಿದ್ದಾರೆ ಎಂದರು.