ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ! ಸಿಎಂ ಸಿದ್ದರಾಮಯ್ಯ ಖಂಡನೆ
ಶಿವಮೊಗ್ಗ ಜಿಲ್ಲೆಯ ಗ್ರಾಮವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
Published: 21st August 2023 02:57 PM | Last Updated: 21st August 2023 07:01 PM | A+A A-

ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಗ್ರಾಮವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಹೊಳೆಹೊನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ರಾತ್ರಿ ಧ್ವಂಸ ನಡೆದಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.
ಗ್ರಾಮದ ಮುಖ್ಯ ಜಂಕ್ಷನ್‌ನಲ್ಲಿ 18 ವರ್ಷಗಳ ಹಿಂದೆ ರಾಷ್ಟ್ರಪಿತನ ಪ್ರತಿಮೆ ಪ್ರತಿಷ್ಠಾಪಿಸಲಾಗಿತ್ತು. ಘಟನೆಯ ತನಿಖೆಯ ಭಾಗವಾಗಿ, ಪೊಲೀಸರು ಹೇಳಿಕೆಗಳನ್ನು ದಾಖಲಿಸಲು ಪ್ರಾರಂಭಿಸಿದ್ದಾರೆ. ಸದ್ಯಕ್ಕೆ ಯಾವುದೇ ಬಂಧನವಾಗಿಲ್ಲ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ಇದನ್ನೂ ಓದಿ: ಮಡಿಕೇರಿ: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ; ನೆಲಕ್ಕುರುಳಿದ ಜನರಲ್ ತಿಮ್ಮಯ್ಯ ಪ್ರತಿಮೆ
ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ಕೃತ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದು, ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ. ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳದೆ, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ.
— CM of Karnataka (@CMofKarnataka) August 21, 2023
ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು…