ಅಪ್ರಾಪ್ತ ಬಾಲಕಿಯೊಂದಿಗೆ ವಿವಾಹ: ಎಫ್ಐಆರ್ ದಾಖಲಾದ 15 ದಿನಗಳ ಬಳಿಕ ಶಿಕ್ಷಕ ಅಮಾನತು

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥನಿಯನ್ನು ವಿವಾಹವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕನನನ್ನು ಅಮಾನತುಗೊಳಿಸಿ ಡಿಡಿಪಿಐ ಸಲೀಂ ಪಾಶಾ ಸೋಮವಾರ ಆದೇಶಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಭಾಲ್ಕಿ (ಬೀದರ್): ಅಪ್ರಾಪ್ತ ವಯಸ್ಸಿನ ವಿದ್ಯಾರ್ಥನಿಯನ್ನು ವಿವಾಹವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕನನನ್ನು ಅಮಾನತುಗೊಳಿಸಿ ಡಿಡಿಪಿಐ ಸಲೀಂ ಪಾಶಾ ಸೋಮವಾರ ಆದೇಶಿಸಿದ್ದಾರೆ.

ಹಲಸಿ ತೂಗಾಂವ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸಂದೀಪಕುಮಾರ ಅಮಾನತುಗೊಂಡವರು. ಶಿಕ್ಷಕನ ಕರ್ತವ್ಯಲೋಪ, ದುರ್ನಡತೆಯಿಂದ ಶಿಕ್ಷಣ ಇಲಾಖೆ ಮುಜುಗರಕ್ಕೆ ಒಳಗಾಗಿದೆ. ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಹಾಗೂ ಮೇಲ್ಮನವಿ) ನಿಯಮಾವಳಿ 1957ರ ನಿಯಮಗಳನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಅದೇ ಗ್ರಾಮದ ಪ್ರೌಢಶಾಲೆಯ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದ.  ಈ ಸಂಬಂಧ ಸಂದೀಪ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ ದಾಖಲಾದ 15 ದಿನಗಳ ಬಳಿಕ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com