ಅನಧಿಕೃತ ಹೋರ್ಡಿಂಗ್: ಕೆಪಿಸಿಸಿಯ ಹಿಂದುಳಿದ ವರ್ಗಗಳ ಸೆಲ್ ಗೆ 50 ಸಾವಿರ ರೂ. ದಂಡ ವಿಧಿಸಿದ ಬಿಬಿಎಂಪಿ!

ನಗರದಲ್ಲಿ ಬ್ಯಾನರ್ ಹಾಕಿದ ಕಾರಣಕ್ಕಾಗಿ ಇದೇ ಮೊದಲ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ಸೋಮವಾರ ಕೆಪಿಸಿಸಿಯ ಹಿಂದುಳಿದ ವರ್ಗಗಳ ಸೆಲ್‌ಗೆ 50,000 ರೂಪಾಯಿ ದಂಡ ವಿಧಿಸಿದೆ.
ಬಿಬಿಎಂಪಿ ಸಾಂದರ್ಭಿಕ ಚಿತ್ರ
ಬಿಬಿಎಂಪಿ ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದಲ್ಲಿ ಬ್ಯಾನರ್ ಹಾಕಿದ ಕಾರಣಕ್ಕಾಗಿ ಇದೇ ಮೊದಲ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ಸೋಮವಾರ ಕೆಪಿಸಿಸಿಯ ಹಿಂದುಳಿದ ವರ್ಗಗಳ ಸೆಲ್‌ಗೆ 50,000 ರೂಪಾಯಿ ದಂಡ ವಿಧಿಸಿದೆ.

ಈ ಬಗ್ಗೆ ಪಾಲಿಕೆ ಪೊಲೀಸ್‌ ದೂರು ಕೂಡ ದಾಖಲಿಸಿದೆ. ಕ್ವೀನ್ಸ್ ರಸ್ತೆಯ ನಂ.94 ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಕೆಪಿಸಿಸಿ ಹಿಂದುಳಿದ ವರ್ಗಗಳ ಸೆಲ್ ಬ್ಯಾನರ್ ಅನ್ನು ಹಾಕಿತ್ತು. ಬಿಬಿಎಂಪಿಯ ಪೂರ್ವ ವಲಯದ ಅಧಿಕಾರಿಗಳು ಬ್ಯಾನರ್ ತೆಗೆದು ಕೆಪಿಸಿಸಿ ಸೆಲ್ ಮೇಲೆ ಕ್ರಮ ಕೈಗೊಂಡರು.

“ಇಲ್ಲಿಯವರೆಗೆ, ನಿಷೇಧ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ನೋಟಿಸ್‌ಗಳನ್ನು ನೀಡಲಾಗಿದೆ ಮತ್ತು ದೂರುಗಳನ್ನು ದಾಖಲಿಸಲಾಗುತ್ತಿತ್ತು. ಆದರೆ ಈ ಬಾರಿ ನಾವು ಕೆಪಿಸಿಸಿ ಸೆಲ್‌ಗೆ ದಂಡ ವಿಧಿಸಿ ಹೈಗ್ರೌಂಡ್ಸ್ ಪೊಲೀಸರಿಗೆ ದೂರು ನೀಡಿದ್ದೇವೆ. ಹೈಕೋರ್ಟ್ ಆದೇಶ ಮತ್ತು ಎಲ್ಲಾ ಅಕ್ರಮ ಹೋರ್ಡಿಂಗ್‌ಗಳನ್ನು ತೆಗೆದುಹಾಕಲು ಮತ್ತು ಉಲ್ಲಂಘಿಸುವವರಿಗೆ ದಂಡ ವಿಧಿಸಲು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರ ನಿರ್ದೇಶನದ ಆಧಾರದ ಮೇಲೆ ನಾವು ಕ್ರಮ ಕೈಗೊಂಡಿದ್ದೇವೆ,” ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು TNIE ಗೆ ತಿಳಿಸಿದ್ದಾರೆ.

ಬೆಂಗಳೂರಿನ ವಸಂತನಗರದ ಮಿಲ್ಲರ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಎದುರು ಬ್ಯಾನರ್ ಹಾಕಲಾಗಿತ್ತು. ಈ ಬ್ಯಾನರ್ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ರಾಜ್ಯದ ಎಲ್ಲಾ ಪಧಾಧಿಕಾರಿಗಳ ಭಾವಚಿತ್ರವಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com