ಕಾವೇರಿ ವಿವಾದ: ತಮಿಳುನಾಡಿಗೆ ನೀರು ಬಿಡುವುದರಿಂದ ಬೆಂಗಳೂರಿನ ಮೇಲೆ ಪರಿಣಾಮವಿಲ್ಲ- ಬಿಡಬ್ಲ್ಯೂಎಸ್ಎಸ್'ಬಿ

ಈ ಬಾರಿ ಮಳೆ ಕೊರತೆಯಿಂದಾಗಿ ಈಗಾಗಲೇ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತಗೊಂಡಿದ್ದು, ಈ ನಡುವಲ್ಲೇ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುತ್ತಿರುವುದು ನಗರ ವಾಸಿಗಳಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಈ ಬಾರಿ ಮಳೆ ಕೊರತೆಯಿಂದಾಗಿ ಈಗಾಗಲೇ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತಗೊಂಡಿದ್ದು, ಈ ನಡುವಲ್ಲೇ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುತ್ತಿರುವುದು ನಗರ ವಾಸಿಗಳಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯನ್ನು ಸಂಪರ್ಕಿಸುತ್ತಿರುವ ಜನರು, ನೀರು ಸರಬರಾಜಿನಲ್ಲಿ ವ್ಯತ್ಯಯಗಳು ಉಂಟಾಗಲಿದೆಯೇ ಎಂದು ಪ್ರಶ್ನಿಸುತ್ತಿದ್ದಾರೆಂದು ತಿಳಿದುಬದಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಪ್ರಾಧಿಕಾರ ನೀಡಿರುವ ಮಾಹಿತಿಗಳ ಪ್ರಕಾರ, ಕೆಆರ್'ಎಸ್ ನಲ್ಲಿ ಪ್ರಸ್ತುತ ಅಂದರೆ, ಆಗಸ್ಟ್ 21ರವರೆಗೆ 79.83 ಟಿಎಂಸಿ ಅಡಿ ಸಂಗ್ರಹವಿದೆ. ಕಳೆದ ವರ್ಷ ಈ ಸಂದರ್ಭದಲ್ಲಿ 112.65 ಟಿಎಂಸಿ ಅಡಿ ನೀರಿನ ಸಂಗ್ರಹವಿತ್ತು ಎಂದು ತಿಳಿದುಬಂದಿದೆ.

ಬಿಡಬ್ಲ್ಯೂಎಸ್ಎಸ್'ಬಿ ಅಧ್ಯಕ್ಷ ಎನ್ ಜಯರಾಮ್ ಅವರು ಮಾತನಾಡಿ, ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಗಳಿರುವುದಿಲ್ಲ ಎಂದು ಹೇಳಿದ್ದಾರೆ.

ನಮ್ಮ ಪಾಲಿನ ನೀರು ನಮಗೆ ಸಿಗುತ್ತಿದೆ. ಬೆಂಗಳೂರಿಗೆ ನೀರು ಸರಬರಾಜು ಎಂದಿನಂತೆ ಮುಂದುವರಿಯುತ್ತದೆ. ನಗರಕ್ಕೆ ಪ್ರತಿ ದಿನ 1,450 ಮಿಲಿಯನ್ ಲೀಟರ್ (MLD) ನೀರನ್ನು ಪೂರೈಸುತ್ತಿದ್ದೇವೆಂದು ತಿಳಿಸಿದ್ದಾರೆ.

ನೀರಾವರಿಗಾಗಿ ಮತ್ತು ಬೆಂಗಳೂರಿನ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ನೀರನ್ನು ಮೀಸಲು ಇಡಲಾಗಿದೆ ಎಂದು ಜಲಮಂಡಳಿ ಮತ್ತು ಬಿಡಬ್ಲ್ಯೂಎಸ್ಎಸ್'ಬಿ ಅಧಿಕಾರಿಗಳು ತಿಳಿಸಿದ್ದಾರೆ.

ನೀರಾವರಿ ಮತ್ತು ಬೆಂಗಳೂರಿನ ಕುಡಿಯುವ ನೀರಿನ ಅಗತ್ಯತೆಗಳು ಆದ್ಯತೆಯಾಗಿದೆ ಎಂದು ಸರ್ಕಾರವು ಸ್ಪಷ್ಟವಾಗಿ ಹೇಳಿದೆ. ಮುಂಗಾರು ಮುಗಿದಿಲ್ಲ, ಆದರೆ, ಮಳೆಯಾಗುವ ನಿರೀಕ್ಷೆಗಳಿವೆ. ಮಳೆ ಬಾರದಿದ್ದರೂ ಬೆಂಗಳೂರಿಗೆ ನೀರು ಪೂರೈಕೆಯಲ್ಲಿ ಕೊರತೆ ಉಂಟಾಗುವುದಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು ನಗರಕ್ಕೆ ಸಾಕಷ್ಟು ನೀರು ಪೂರೈಕೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಬಿಡಬ್ಲ್ಯುಎಸ್‌ಎಸ್‌ಬಿ ಈಗಾಗಲೇ ಸಿಎಂಸಿ ಮತ್ತು ಟಿಎಂಸಿ ಪ್ರದೇಶಗಳಲ್ಲಿ ಬೋರ್‌ವೆಲ್ ನೀರು ಸರಬರಾಜು ಮತ್ತು ಬೋರ್‌ವೆಲ್‌ಗಳನ್ನು ನಿರ್ವಹಿಸುವ ಕಾರ್ಯವನ್ನು ಕೈಗೊಂಡಿದೆ. ನೀರಿನ ಕೊರತೆ ಎದುರಾಗಿದ್ದೇ ಆದರೆ, 110 ಗ್ರಾಮಗಳಲ್ಲಿ ಕೊಳೆ ಬಾವಿ ಕೊರೆಸಿ ನೀರು ಪೂರೈಕೆ ಮಾಡಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ.

ಕೆಲವು ವಾರ್ಡ್‌ಗಳಲ್ಲಿ ಮುಳುಗಡೆಯಾದ ಬೋರ್‌ವೆಲ್‌ಗಳಿಗೆ ಅಧಿಕ ಹಣ ಮಂಜೂರು ಮಾಡಿರುವ ಬಗ್ಗೆ ದೂರುಗಳು ಬಂದಿವೆ. ಇದನ್ನು ಪರಿಶೀಲಿಸಲಾಗುವುದು. ಬಿಡಬ್ಲ್ಯುಎಸ್‌ಎಸ್‌ಬಿ ನೀರು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಗೊಂಡ ಎಲ್ಲಾ ಪ್ರದೇಶಗಳಲ್ಲಿ ಕಾವೇರಿ ನೀರು ಸರಬರಾಜಿಗೆ ಪೈಪ್‌ಲೈನ್‌ಗಳನ್ನು ಹಾಕುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com