ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 1 ರಿಂದ ಹತ್ತು ದಿನ ಅವಕಾಶ
ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಗಡುವನ್ನು ಮತ್ತೆ ವಿಸ್ತರಿಸಲಾಗಿದ್ದು, ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರವರೆಗೆ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು.
Published: 23rd August 2023 10:37 AM | Last Updated: 23rd August 2023 10:37 AM | A+A A-

ಪ್ರಾತಿನಿಧಿಕ ಚಿತ್ರ
ಮಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಗಡುವನ್ನು ಮತ್ತೆ ವಿಸ್ತರಿಸಲಾಗಿದ್ದು, ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರವರೆಗೆ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು.
ಈ ಮೊದಲು ಪಡಿತರ ಚೀಟಿಯಲ್ಲಿನ ತಿದ್ದುಪಡಿಗೆ ಆಗಸ್ಟ್ 21 ಕೊನೆಯ ದಿನವಾಗಿತ್ತು. ಆದರೆ, ಸೋಮವಾರ ಸರ್ವರ್ ದೋಷದಿಂದಾಗಿ ಹಲವರು ತೊಂದರೆ ಅನುಭವಿಸಿದ ಕಾರಣ, ಸಾರ್ವಜನಿಕರು ಇನ್ನಷ್ಟು ಕಾಲಾವಕಾಶ ನೀಡುವಂತೆ
ಬೇಡಿಕೆಯಿಟ್ಟಿದ್ದರು. ಇದನ್ನು ಪರಿಗಣಿಸಿ, ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಆಗಸ್ಟ್ 23ರವರೆಗೂ ಕಾಲಾವಕಾಶ ನೀಡಲಾಗಿತ್ತು.
ಇದೀಗ, ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿಗಳನ್ನು ಸೆಪ್ಟೆಂಬರ್ 1 ರಿಂದ 10 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸ್ವೀಕರಿಸಲಾಗುವುದು ಎಂದು ಹೇಳಲಾಗಿದೆ.
ಇದನ್ನೂ ಓದಿ: ತ್ವರಿತಗತಿಯಲ್ಲಿ ನೇರ ನಗದು ವರ್ಗಾವಣೆ; ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ