ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ, ಇಸ್ರೊ ಕಚೇರಿಗೆ ಭೇಟಿ: ಈ ಮಾರ್ಗಗಳಲ್ಲಿ ಸಂಚಾರ ಬದಲಾವಣೆ

ಚಂದ್ರಯಾನ-3ರ ಯಶಸ್ಸಿನ ಅಲೆಯಲ್ಲಿ ಇಸ್ರೊ ಬಾಹ್ಯಾಕಾಶ ಸಂಸ್ಥೆ ಮತ್ತು ಇಡೀ ಭಾರತೀಯರು ತೇಲುತ್ತಿದ್ದಾರೆ. ಮೊನ್ನೆ ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಇಳಿಕೆಯಾದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ದಕ್ಷಿಣ ಆಫ್ರಿಕಾದಲ್ಲಿದ್ದರು.
ಪ್ರಧಾನಿ ನರೇಂದ್ರ ಮೋದಿ(ಸಂಗ್ರಹ ಚಿತ್ರ)
ಪ್ರಧಾನಿ ನರೇಂದ್ರ ಮೋದಿ(ಸಂಗ್ರಹ ಚಿತ್ರ)

ಬೆಂಗಳೂರು: ಚಂದ್ರಯಾನ-3ರ ಯಶಸ್ಸಿನ ಅಲೆಯಲ್ಲಿ ಇಸ್ರೊ ಬಾಹ್ಯಾಕಾಶ ಸಂಸ್ಥೆ ಮತ್ತು ಇಡೀ ಭಾರತೀಯರು ತೇಲುತ್ತಿದ್ದಾರೆ. ಮೊನ್ನೆ ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಇಳಿಕೆಯಾದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ದಕ್ಷಿಣ ಆಫ್ರಿಕಾದಲ್ಲಿದ್ದರು.

ಅಲ್ಲಿಂದ ದೂರವಾಣಿ ಕರೆ ಮಾಡಿ ಇಸ್ರೊ ಅಧ್ಯಕ್ಷ ಎಸ್ ಸೋಮನಾಥ್ ಜೊತೆ ಮಾತನಾಡಿದ್ದ ಪ್ರಧಾನ ಮಂತ್ರಿಗಳು ನಾಳೆ ಖುದ್ದು ಬೆಂಗಳೂರಿನ ಇಸ್ರೋ ಕಚೇರಿಗೆ ಬಂದು ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಳೆ ಶನಿವಾ ಬೆಂಗಳೂರಿಗೆ ಆಗಮಿಸಲಿದ್ದಾರೆ. ದಕ್ಷಿಣ ಆಫ್ರಿಕಾದ ಜೋಹಾನ್ಸ್​​​ಬರ್ಗ್​​ನಲ್ಲಿ ಬ್ರಿಕ್ಸ್​ ಶೃಂಗಸಭೆಯಲ್ಲಿ ಭಾಗಿಯಾಗಿರುವ ಪ್ರಧಾನಿ ಮೋದಿ ಅಲ್ಲಿಂದ ನೇರವಾಗಿ ನಾಳೆ ಬೆಳಗ್ಗೆ ಬೆಂಗಳೂರಿನ ಎಚ್​ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಹೀಗಾಗಿ ನಾಳೆ ನಗರದ ಕೆಲ ರಸ್ತೆಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

ನಾಳೆ ನಸುಕಿನ ಜಾವ 4:30 ರಿಂದ ಬೆಳಗ್ಗೆ 9:30 ರ ವರೆಗೆ ಕೆಳಕಂಡ ರಸ್ತೆ ಮಾರ್ಗ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಈ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗ ಬಳಕೆಗೆ ಬೆಂಗಳೂರು ಸಂಚಾರಿ ಪೋಲಿಸರು ಮನವಿ ಮಾಡಿದ್ದಾರೆ. 

ಓಲ್ಡ್ ಏರ್ಪೋರ್ಟ್ ರಸ್ತೆ
ಓಲ್ಡ್‌ ಮದ್ರಾಸ್ ರಸ್ತೆ
ಎಂ.ಜಿ.ರಸ್ತೆ
ಕಬ್ಬನ್ ರಸ್ತೆ
ರಾಜಭವನ ರಸ್ತೆ
ಬಳ್ಳಾರಿ ರಸ್ತೆ (ಮೇಖ್ರಿ ಸರ್ಕಲ್)
ಸಿವಿ ರಾಮನ್ ರಸ್ತೆ
ಯಶವಂತಪುರ ಫ್ಲೈ ಓವರ್
ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರದವರೆಗೆ)
ಮಾಗಡಿ ರಸ್ತೆ, ಹೊರವರ್ತುಲ ರಸ್ತೆ (ಗೊರಗುಂಟೆ ಪಾಳ್ಯ ಜಂಕ್ಷನ್‌ನಿಂದ ಸುಮನಹಳ್ಳಿ)
ಗುಬ್ಬಿ ತೋಟದಪ್ಪ ರಸ್ತೆ
ಜಾಲಹಳ್ಳಿ ಕ್ರಾಸ್‌ ರಸ್ತೆ

ನಾಳೆ ಬೆಳಗಿನ ಜಾವ 04.00 ಗಂಟೆಯಿಂದ ಬೆಳಗ್ಗೆ 11.00 ಗಂಟೆಯವರೆಗೆ ಭಾರೀ ಸರಕು ಸಾಗಾಣಿಕೆ ವಾಹನ (Heavy Goods Vehicles) ಸಂಚಾರ ನಿಷೇಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ನಾಳೆಯ ಕಾರ್ಯಕ್ರಮ ವೇಳಾಪಟ್ಟಿ ಇಂತಿದೆ
ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡುವ ಮೋದಿ
ನಾಳೆ ಬೆಳಗ್ಗೆ 5.55ಕ್ಕೆ ಹೆಚ್ ಎಎಲ್ ಏರ್‌ಪೋರ್ಟ್‌ಗೆ ಮೋದಿ ಆಗಮನ
ಬೆಳಗ್ಗೆ 6.30ರವರೆಗೆ ಏರ್‌ಪೋರ್ಟ್‌ನಲ್ಲಿ ವಿಶ್ರಾಂತಿ
ಬೆಳಗ್ಗೆ 7 ಗಂಟೆಗೆ ಇಸ್ರೋ ಕೇಂದ್ರ ಕಚೇರಿಗೆ ಭೇಟಿ
ಬೆಳಗ್ಗೆ 8 ಗಂಟೆಯವರೆಗೆ ಇಸ್ರೋ ಕಚೇರಿಯಲ್ಲಿ ಪ್ರಧಾನಿ ಮೋದಿ ಸಭೆ
ಬೆಳಗ್ಗೆ 8.35ಕ್ಕೆ ಬೆಂಗಳೂರಿನಿಂದ ದೆಹಲಿಗೆ ನಿರ್ಗಮನ

ಪ್ರಧಾನಿ ರೋಡ್ ಶೋ: ಮುಂದಿನ ಏಪ್ರಿಲ್ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಪ್ರಧಾನಿ ಆಗಮನವನ್ನು ಸದ್ವಿನಿಯೋಗ ಮಾಡಿಕೊಳ್ಳಲು ಬಿಜೆಪಿ ಯೋಜಿಸುತ್ತಿದೆ. ಅದ್ಧೂರಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸ್ವಾಗತಕ್ಕೆ ಎಚ್​ಎಎಲ್​​ ಏರ್​ಪೋರ್ಟ್​ನಲ್ಲಿ 5-6 ಸಾವಿರ ಜನರನ್ನು ಸೇರಿಸಲು ಉದ್ದೇಶಿಸಲಾಗಿದೆ. ಮೋದಿ ಅವರು ಏರ್​ಪೋರ್ಟ್​ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. 

ಪೀಣ್ಯದಲ್ಲಿ ಮೋದಿ ಅವರು ಸುಮಾರು 1 ಕಿಲೋಮೀಟರ್ ರೋಡ್​ಶೋ ನಡೆಸುವ ಸಾಧ್ಯತೆ ಹೆಚ್ಚಾಗಿದೆ. ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳುವಂತೆ ಬೆಂಗಳೂರಿನ ಬಿಜೆಪಿ ಶಾಸಕರಿಗೆ ಕೂಡ ಸೂಚನೆ ನೀಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com