ಮಂಗಳೂರು: ನೈತಿಕ ಪೊಲೀಸ್ ಗಿರಿ, ನಮ್ಮ ಕಾಲೇಜಿನ ಹುಡುಗಿ ಬೇಕಾ? ಎಂದು ಮುಸ್ಲಿಂ ಯುವಕನಿಗೆ ಅದೇ ಸಮುದಾಯದವರಿಂದ ಹಲ್ಲೆ
ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದ್ದು ಮುಸ್ಲಿಂ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದಾನೆ ಎಂದು ಆರೋಪಿಸಿ ಮುಸ್ಲಿಂ ವಿದ್ಯಾರ್ಥಿನಿಗೆ ಅದೇ ಸಮುದಾಯದ ವಿದ್ಯಾರ್ಥಿಗಳು ಥಳಿಸಿದ್ದಾರೆ.
Published: 26th August 2023 04:58 PM | Last Updated: 26th August 2023 04:58 PM | A+A A-

ಸಾಂದರ್ಭಿಕ ಚಿತ್ರ
ಮಂಗಳೂರು: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದ್ದು ಮುಸ್ಲಿಂ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದಾನೆ ಎಂದು ಆರೋಪಿಸಿ ಮುಸ್ಲಿಂ ವಿದ್ಯಾರ್ಥಿನಿಗೆ ಅದೇ ಸಮುದಾಯದ ವಿದ್ಯಾರ್ಥಿಗಳು ಥಳಿಸಿದ್ದಾರೆ.
ಮಂಗಳೂರಿನ ಕಾಲೇಜು ಒಂದರಲ್ಲಿ ಕಾಸರಗೋಡು ಜಿಲ್ಲೆಯ ಉಪ್ಪಳದ 18 ವರ್ಷದ ಇಬ್ರಾಹಿಂ ಫಾಹಿಂ ವ್ಯಾಸಂಗ ಮಾಡುತ್ತಿದ್ದು ಮುಸ್ಲಿಂ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದಾನೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ: ಕಾರ್ಕಳ: ನೈತಿಕ ಪೊಲೀಸ್ ಗಿರಿ ಪ್ರಕರಣ 5 ಮಂದಿ ಬಂಧನ
ಅನಾನ್, ತಬೀಶ್ ಸೇರಿ ಹಲವರು ಇಬ್ರಾಹಿಂನನ್ನು ಮಂಗಳೂರು ಹೊರವಲಯದ ಅಡ್ಯಾರ್ ಬಳಿಯ ಫ್ಲ್ಯಾಟ್ ಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಇಬ್ರಾಹಿಂ ಮೇಲೆ ಬೇಲ್ಟ್ ನಿಂದ ಹಲ್ಲೆ ಮಾಡಿದ್ದು ತೀವ್ರವಾಗಿ ಗಾಯಗೊಂಡಿರುವ ಆತನನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.