ಮೃತ ರಮ್ಯಾ
ರಾಜ್ಯ
ಕೋಲಾರದಲ್ಲಿ ಮರ್ಯಾದಾ ಹತ್ಯೆ: ಮಗಳನ್ನೇ ಹೊಡೆದು ಕೊಂದ ತಂದೆ!
ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರದ ತೊಟ್ಲಿ ಗ್ರಾಮದಲ್ಲಿ ನಡೆದಿದೆ.
ಕೋಲಾರ: ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರದ ತೊಟ್ಲಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಯುವತಿಯನ್ನು 19 ವರ್ಷದ ರಮ್ಯಾ ಎಂದು ಗುರುತಿಸಲಾಗಿದೆ. ಅನ್ಯ ಜಾತಿಯ ಯುವಕನನ್ನು ಪ್ರೀಸಿತದಂತೆ ಎಷ್ಟು ಹೇಳಿದರೂ ಮಗಳು ಕೇಳಲಿಲ್ಲ ಎಂದು ತಂದೆ ವೆಂಕಟೇಶಗೌಡ ಮಗಳ ಮೇಲೆ ಹಲ್ಲೆ ನಡೆಸಿದ್ದರು. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಯುವತಿ ಮೃತಪಟ್ಟಿದ್ದಾಳೆ.
ಕಳೆದ ಶುಕ್ರವಾರ ಈ ಘಟನೆ ನಡೆಸಿದ್ದು ನಂತರ ಸದ್ದಿಲ್ಲದೆ ಮಗಳ ಅಂತ್ಯ ಸಂಸ್ಕಾರವನ್ನು ಪೋಷಕರು ನೇರವೇರಿಸಿದ್ದರು. ಇದಾದ ಬಳಿಕ ಊರಿನಲ್ಲಿ ಯುವತಿಯ ಕೊಲೆಯಾಗಿದೆ ಎಂಬ ಸುದ್ದಿ ಹಬ್ಬಿದ್ದರಿಂದ ಈ ಬಗ್ಗೆ ಪೊಲೀಸರು ಯುವತಿಯ ತಂದೆಯನ್ನು ಕರೆಸಿ ವಿಚಾರಣೆ ನಡೆಸಿದಾಗ ಮರ್ಯಾದಾ ಹತ್ಯೆ ಬೆಳಕಿಗೆ ಬಂದಿದೆ.
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ