ಮಂಗಳೂರು: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಅಪಹರಣ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಬಂಧನ
ಮಂಗಳೂರು ನಗರದ ಖಾಸಗಿ ಕಾಲೇಜೊಂದರ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
Published: 27th August 2023 12:42 PM | Last Updated: 27th August 2023 12:42 PM | A+A A-

ಸಾಂದರ್ಭಿಕ ಚಿತ್ರ
ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಪಾಣೆಮಂಗಳೂರಿನ ಇಬ್ರಾಹಿಂ ತಭಿಷ್ (19) ಮತ್ತು ಮೊಹಮ್ಮದ್ ಶಕೀಫ್ (19), ಬಂಟ್ವಾಳದ ಅಬ್ದುಲ್ಲ ಹನ್ನಾನ್ (19), ಮೊಹಮ್ಮದ್ ಶಾಹಿಕ್ (19) ಮತ್ತು ಮನ್ಸೂರ್ (37) ಮತ್ತು ಯು ಪಿ ತನ್ವೀರ್ (20) ಮತ್ತು ಬಜಾಲ್‌ನ ಅಬ್ದುಲ್ ರಶೀದ್ (20) ಎಂದು ಗುರುತಿಸಲಾಗಿದೆ.
ಆರೋಪಿಗಳ ವಿರುದ್ಧ ಆಗಸ್ಟ್ 23ರಂದು ನಗರದ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾದ ಶಮೀರ್ ಮತ್ತು ಇಬ್ರಾಹಿಂ ಫಹೀಂ ಅವರನ್ನು ಅಪಹರಿಸಿ ಹಲ್ಲೆ ಮಾಡಿದ ಆರೋಪವಿದೆ.
ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 323, 324, 341, 363, 506 ಮತ್ತು 149 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.