ಗ್ಯಾರಂಟಿ ಸರ್ಕಾರಕ್ಕೆ 100 ದಿನ: ನಮ್ಮ ಸರ್ಕಾರ ಸಮಾನತೆಯ ಹಾದಿಯಲ್ಲಿ ನಡೆಯುತ್ತಿದೆ; ಸಿಎಂ ಸಿದ್ದರಾಮಯ್ಯ

2023ರ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನೂರು ದಿನಗಳನ್ನು ಪೂರೈಸಿದ್ದು, ‘ಗ್ಯಾರಂಟಿ ಸರ್ಕಾರಕ್ಕೆ 100 ದಿನ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಸ ಹಂಚಿಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನೂರು ದಿನಗಳನ್ನು ಪೂರೈಸಿದ್ದು, ‘ಗ್ಯಾರಂಟಿ ಸರ್ಕಾರಕ್ಕೆ 100 ದಿನ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಸ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ " 100 ದಿನಗಳು" ಪೂರೈಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ.

ಗ್ಯಾರಂಟಿ ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಜೊತೆಜೊತೆಗೆ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಕನಕದಾಸರು, ನಾರಾಯಣ ಗುರು ಮುಂತಾದ ದಾರ್ಶನಿಕರು ತೋರಿದ ಸಮಾನತೆಯ ಹಾದಿಯಲ್ಲಿ ನಾಡನ್ನು ಮುನ್ನಡಿಸಿಕೊಂಡು ಹೋಗುತ್ತಿದ್ದೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಪಯಣಕ್ಕಿಂದು ಶತಕ ಸಂಭ್ರಮ.

ಈ ವಿಶೇಷ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ ನಾಡಿನ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಿಮ್ಮೆಲ್ಲರ ಸಹಕಾರ ನಿರಂತರವಾಗಿರಲಿ ಎಂದು ಹೇಳಿದ್ದಾರೆ.

ಹಸಿವುಮುಕ್ತ ಕರ್ನಾಟಕ" ನಿರ್ಮಾಣದ ಸಂಕಲ್ಪದೊಂದಿಗೆ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯಡಿ ನಾಡಿನ 1.28 ಕೋಟಿ ಬಡ ಕುಟುಂಬಗಳ ಪ್ರತಿ ವ್ಯಕ್ತಿಗೆ ತಲಾ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲು ಉದ್ದೇಶಿಸಲಾಗಿದೆ. ಸದ್ಯ ಪೂರ್ಣ ಪ್ರಮಾಣದಲ್ಲಿ ಅಕ್ಕಿಯ ಲಭ್ಯತೆಯಿಲ್ಲದ ಕಾರಣಕ್ಕೆ ತಲಾ 5 ಕೆ.ಜಿ ಅಕ್ಕಿ ಹಾಗೂ ಇನ್ನುಳಿದ 5 ಕೆ.ಜಿ ಅಕ್ಕಿಯ ಬದಲಿಗೆ ರೂ.170 ಅನ್ನು ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ.

ನಮ್ಮ ಮೊದಲ '100 ದಿನಗಳ' ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ. ಗ್ಯಾರಂಟಿಗಳ ಈಡೇರಿಕೆಯ ಜೊತೆಗೆ ಅಭಿವೃದ್ಧಿಯ ರಥವನ್ನು ಮುನ್ನಡೆಸುತ್ತಿರುವ ನಮ್ಮೊಂದಿಗೆ ನಿಮ್ಮೆಲ್ಲರ ಸಹಕಾರವಿರಲಿ.

ಬೆಲೆಯೇರಿಕೆಯ ಕತ್ತಲು ಸರಿಸಿ ಭರವಸೆಯ ಬೆಳಕು ಹರಿಸುವ ಆಶಯದೊಂದಿಗೆ ನಾವು ಜಾರಿಗೆ ತಂದಿರುವ "ಗೃಹಜ್ಯೋತಿ" ಯೋಜನೆಯಡಿ ನಾಡಿನ ಗೃಹಬಳಕೆದಾರರಿಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ಅನ್ನು ನೀಡಲಾಗುತ್ತಿದೆ. ಈಗಾಗಲೇ 1.48 ಕೋಟಿ ಕುಟುಂಬಗಳು ಯಶಸ್ವಿಯಾಗಿ ನೋಂದಣಿ ಮಾಡಿಕೊಳ್ಳುವ ಮೂಲಕ ಯೋಜನೆಯ ಲಾಭ ಪಡೆಯುತ್ತಿವೆ.

ನಮ್ಮ ಮೊದಲ '100 ದಿನಗಳ' ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ. ಗ್ಯಾರಂಟಿಗಳ ಈಡೇರಿಕೆಯ ಜೊತೆಗೆ ಅಭಿವೃದ್ಧಿಯ ರಥವನ್ನು ಮುನ್ನಡೆಸುತ್ತಿರುವ ನಮ್ಮೊಂದಿಗೆ ನಿಮ್ಮೆಲ್ಲರ ಸಹಕಾರವಿರಲಿ ಎಂದು ತಿಳಿಸಿದ್ದಾರೆ.

ನಾಡಿನ ಮಹಿಳೆಯರು ಶಿಕ್ಷಣ, ಉದ್ಯೋಗ ಸಂಬಂಧಿತ ಪ್ರಯಾಣಗಳಿಗೆ ಯಾರ ಮೇಲೆಯೂ ಅವಲಂಬಿತರಾಗದೆ ಸಾರ್ವಜನಿಕ ಕ್ಷೇತ್ರಗಳಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂಬ ಸದಾಶಯದೊಂದಿಗೆ ಜಾರಿಗೆ ತಂದಿರುವ "ಶಕ್ತಿ" ಯೋಜನೆಯಡಿ ನಿತ್ಯ 50 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ತಮ್ಮ ಕೆಲಸ ಕಾರ್ಯ ನಿಮಿತ್ತ ಉಚಿತವಾಗಿ ಸಂಚರಿಸುತ್ತಿದ್ದಾರೆ. ಯೋಜನೆ ಜಾರಿಯಾದ ದಿನದಿಂದ ಈ ವರೆಗೆ ಸುಮಾರು 43 ಕೋಟಿ (ಒಟ್ಟು ಪ್ರಯಾಣ ಸಂಖ್ಯೆ) ಮಂದಿ ಉಚಿತ ಪ್ರಯಾಣ ನಡೆಸಿದ್ದು, ಒಟ್ಟು ಟಿಕೆಟ್ ಮೌಲ್ಯ 1,000 ಕೋಟಿ ರೂಪಾಯಿ ದಾಟಿದೆ.

ನಾಡಿನ ಮಹಿಳೆಯರಿಂದ ವ್ಯಕ್ತವಾಗುತ್ತಿರುವ ಪ್ರಶಂಸೆಯ ಮಾತುಗಳು ಯೋಜನೆಯ ಸಫಲತೆಗೆ ಹಿಡಿದ ಕನ್ನಡಿಯಂತಿದೆ. ನಮ್ಮ ಮೊದಲ '100 ದಿನಗಳ' ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ.ಗ್ಯಾರಂಟಿಗಳ ಈಡೇರಿಕೆಯ ಜೊತೆಗೆ ಅಭಿವೃದ್ಧಿಯ ರಥವನ್ನು ಮುನ್ನಡೆಸುತ್ತಿರುವ ನಮ್ಮೊಂದಿಗೆ ನಿಮ್ಮೆಲ್ಲರ ಸಹಕಾರವಿರಲಿ.

ಕುಟುಂಬ ನಿರ್ವಹಣೆಯ ಹೊಣೆ ಹೊತ್ತ ಮಹಿಳೆಯರಿಗೆ ನಿತ್ಯ ಎದುರಾಗುವ ಬೆಲೆಯೇರಿಕೆಯ ಸಂಕಷ್ಟಗಳನ್ನು ತಗ್ಗಿಸಿ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ನೆರವಾಗುವ ಉದ್ದೇಶದೊಂದಿಗೆ ನಾವು ಜಾರಿಗೊಳಿಸಲಿರುವ "ಗೃಹಲಕ್ಷ್ಮಿ" ಯೋಜನೆಗೆ ಈ ವರೆಗೆ 1.08 ಕೋಟಿ ಮಹಿಳೆಯರು ಯಶಸ್ವಿಯಾಗಿ ನೋಂದಣಿ ಮಾಡಿದ್ದು, ಈ ತಿಂಗಳ 30 ರಿಂದ ಎಲ್ಲಾ ನೋಂದಾಯಿತ ಮಹಿಳೆಯರ ಬ್ಯಾಂಕ್ ಖಾತೆಗೆ ಮಾಸಿಕ ರೂ. 2,000 ನೇರ ವರ್ಗಾವಣೆ ಮಾಡಲಿದ್ದೇವೆ. ಪ್ರಸಕ್ತ ಸಾಲಿನಲ್ಲಿ ಈ ಕಾರ್ಯಕ್ರಮಕ್ಕಾಗಿ ರೂ. 17,500 ಕೋಟಿ ಮೀಸಲಿಡಲಾಗಿದೆ.

ನಾಡಿನ ಎಲ್ಲಾ ಅರ್ಹ ಕುಟುಂಬಗಳಿಗೆ ಯೋಜನೆಯ ಲಾಭ ತಲುಪಿಸಿ, ಬಡಜನರಿಗೂ ಸ್ವಾವಲಂಬಿ ಬದುಕು ಕಟ್ಟಿಕೊಡಬೇಕು ಎಂಬ ನಮ್ಮ ಆಶಯಕ್ಕೆ ನಿಮ್ಮ ಬೆಂಬಲವಿರಲಿ. ನಮ್ಮ ಮೊದಲ '100 ದಿನಗಳ' ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ. ಗ್ಯಾರಂಟಿಗಳ ಈಡೇರಿಕೆಯ ಜೊತೆಗೆ ಅಭಿವೃದ್ಧಿಯ ರಥವನ್ನು ಮುನ್ನಡೆಸುತ್ತಿರುವ ನಮ್ಮೊಂದಿಗೆ ನಿಮ್ಮೆಲ್ಲರ ಸಹಕಾರವಿರಲಿ.

ಪ್ರಾದೇಶಿಕ ಅಸಮತೋಲನದಿಂದಾಗಿ ನೈಸರ್ಗಿಕ ಸಂಪನ್ಮೂಲಗಳ ಕೊರತೆಯಿರುವ ಕಲ್ಯಾಣ ಕರ್ನಾಟಕ ಪ್ರದೇಶವನ್ನು ನಾಡಿನ ಅಭಿವೃದ್ಧಿಯ ವೇಗಕ್ಕೆ ಸಮಾನವಾಗಿ ಮುನ್ನಡೆಸಿಕೊಂಡು ಹೋಗಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಪ್ರಸಕ್ತ ಸಾಲಿನಲ್ಲಿ ರೂ.3,000 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಕ್ರಮಕೈಗೊಳ್ಳಲಾಗಿದೆ.

ಗುಣಮಟ್ಟದ ರಸ್ತೆ, ಶುದ್ಧ ಕುಡಿಯುವ ನೀರು, ವಸತಿ, ಉತ್ಕೃಷ್ಟ ಆರೋಗ್ಯ ಸೇವೆ, ಆಧುನಿಕ ಶಿಕ್ಷಣ ಸೌಲಭ್ಯಗಳನ್ನು ನೀಡುವ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದ ಸರ್ವಾಂಗೀಣ ಪ್ರಗತಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಮ್ಮ ಮೊದಲ '100 ದಿನಗಳ' ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆಂದು ಎಂದು ತಿಳಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com