ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಶಿವಕುಮಾರ್ ಸಾವು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಚೇರಿಯಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಸಿಎಂ ಶಿವಕುಮಾರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿದ್ದಾರೆ.
Published: 30th August 2023 09:18 PM | Last Updated: 30th August 2023 09:18 PM | A+A A-

ಶಿವಕುಮಾರ್
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಚೇರಿಯಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಸಿಎಂ ಶಿವಕುಮಾರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿದ್ದಾರೆ.
ಬಿಬಿಎಂಪಿಯ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್‌ನಲ್ಲಿ ಆಗಸ್ಟ್ 11 ರಂದು ಸಂಭವಿಸಿದ್ದ ಅಗ್ನಿ ಅವಘಡದಲ್ಲಿ 45 ವರ್ಷದ ಶಿವಕುಮಾರ್ ಅವರು ಸೇರಿದಂತೆ 9 ನೌಕರರು ಗಾಯಗೊಂಡಿದ್ದರು.
ಇದನ್ನು ಓದಿ: ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಮುಖ್ಯ ಎಂಜಿನಿಯರ್ ಪ್ರಹ್ಲಾದ್'ಗೆ ಮತ್ತೊಮ್ಮೆ ನೋಟಿಸ್ ಜಾರಿಗೆ ಪೊಲೀಸರು ಮುಂದು!
ಶೇ. 25 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಶಿವಕುಮಾರ್ ಅವರನ್ನು ಕಳೆದ ಕೆಲ ದಿನಗಳ ಹಿಂದೆ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಶಿವಕುಮಾರ್ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅಪೊಲೋ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ಬಿಬಿಎಂಪಿ ಮುಖ್ಯ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಶಿವಕುಮಾರ್ ಅವರು ಮೈಸೂರು ಜಿಲ್ಲೆಯ ನಂಜನಗೂಡು ಮೂಲದವರಾಗಿದ್ದು, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
.@BBMPCOMM & Apollo hospitals announced- chief engineer Shivakumar no more. He was one of the burns injured in the blast in BBMP head office @NewIndianXpress @XpressBengaluru @KannadaPrabha @Cloudnirad @NammaBengaluroo @BBMPAdmn pic.twitter.com/7g6i8FLvug
— Bosky Khanna (@BoskyKhanna) August 30, 2023