ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ವಿರುದ್ಧ ಬಿಜೆಪಿ ಪ್ರತಿಭಟನೆ
ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿರುವ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿರುವ ಕುರಿತು ರಾಜ್ಯ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿವೆ.
Published: 30th August 2023 08:53 AM | Last Updated: 30th August 2023 08:41 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿರುವ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿರುವ ಕುರಿತು ರಾಜ್ಯ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿವೆ.
ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿರುವುದರ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ, ಧರ್ಮಸ್ಥಳದ ಧರ್ಮಾಧಿಕಾರಿಯಾಗಿರುವ ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗಡೆ ವಿರುದ್ಧವೂ ಪಕ್ಷದಲ್ಲಿ ಹಲವು ಟೀಕೆಗಳು ವ್ಯಕ್ತವಾಗುತ್ತಿವೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸಂತೋಷ್ ರಾವ್ ಖುಲಾಸೆಗೊಳಿಸಿರುವುದರ ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಅಲ್ಲದೆ, ವೀರೇಂದ್ರ ಹೆಗಡೆ ಕುಟುಂಬದ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ.
ಇದನ್ನೂ ಓದಿ: 'ಸೌಜನ್ಯಾ ಹತ್ಯೆ ಪ್ರಕರಣ: ನ್ಯಾಯಾಲಯವಷ್ಟೇ ಹೊಸ ತನಿಖೆಗೆ ಆದೇಶಿಸಬಹುದು; ಗೃಹ ಸಚಿವ ಜಿ ಪರಮೇಶ್ವರ್
ರಾಜಕೀಯ ವಿಶ್ಲೇಷಕ ಬಿಎಸ್ ಮೂರ್ತಿ ಅವರು ಮಾತನಾಡಿ, ಚುನಾವಣೆ ಸಮಯದಲ್ಲಿ ಸಣ್ಣ ಪಟ್ಟಣಗಳು ಮತ್ತು ಸ್ಥಳಗಳಲ್ಲಿ ಇಷ್ಟು ದೊಡ್ಡ ಜನಸಂದಣಿಯನ್ನು ಎಂದೂ ನೋಡಿರಲಿಲ್ಲ. ಧರ್ಮಸ್ಥಳದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಪ್ರತಿಭಟನೆಗೆ ಸೇರುತ್ತಿದ್ದಾರೆ. ಕೆಲವು ಪ್ರತಿಭಟನೆಗಳಲ್ಲಿ 15,000-20,000 ಕ್ಕಿಂತ ಹೆಚ್ಚಿನ ಜನರು ಸೇರುತ್ತಿದ್ದಾರೆ. ಬಿಜೆಪಿ ನಾಯಕರೊಬ್ಬರ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರ ತನಿಖೆಯ ಕಾರ್ಯವೈಖರಿ ವಿರುದ್ಧ ಕೆಲವು ಪ್ರತಿಭಟನೆ ನಡೆಸುತ್ತಿದ್ದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರಮುಖ ತಾಲೂಕುಗಳಲ್ಲಿ ಈ ಪ್ರತಿಭಟನೆಗಳಿಗೆ ಜನರನ್ನು ಸಜ್ಜುಗೊಳಿಸುವಲ್ಲಿ ಇಡೀ ಸಂಘ ಪರಿವಾರದ ಜಾಲ ಸಕ್ರಿಯವಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಸೌಜನ್ಯಾ ಮನೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಭೇಟಿ
ಮಹೇಶ್ ಶೆಟ್ಟಿ ತಿಮ್ಮರೋಡಿ ನೇತೃತ್ವದಲ್ಲಿ ನಿನ್ನೆ ಕೂಡ ಪ್ರತಿಭಟನೆ ನಡೆದವು. ಹಂತಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ನಡುವೆ ಬಿಜೆಪಿಯ ಹಲವು ನಾಯಕರು ಮರು ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಈ ಪ್ರತಿಭಟನೆ ಶನಿವಾರ ಮುಂಬೈ ತಲುಪಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಮೂಲದ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.
ಈ ನಡುವೆ ಧರ್ಮಾಧಿಕಾರಿ ವೀರೇಂದ್ರ ಹಗಡೆ ಅವರ ಕೆಲ ಬೆಂಬಲಿಗರು, ಇದು ಧರ್ಮಾಧಿಕಾರಿಗಳನ್ನು ದೂಷಿಸಲು ರೂಪಿಸಲಾಗಿರುವ ತಂತ್ರವಾಗಿದೆ ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, ಪ್ರಕರಣದ ಮರುತನಿಖೆ ಇಲ್ಲ ಎಂದು ಸ್ಪಷ್ಟಪಡಿಸಿದ್ದರು. ಆದರೆ, ಪ್ರಕರಣದ ಮರು ತನಿಖೆ ನಡೆಸುವಂತೆ ಕೇಂದ್ರಕ್ಕೆ ಪತ್ರ ಬರೆದಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.