ಬೀದರ್: ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿನಿಯರು ನೀರುಪಾಲು!

ಕೆರೆಯಲ್ಲಿ ಈಜಲು ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಮುಳುಗಿ ನೀರುಪಾಲಾಗಿರುವ ಘಟನೆ ಬಸವಕಲ್ಯಾಣ ತಾಲೂಕಿನ ಫುಲ್ದರ್ ವಾಡಿ ಗ್ರಾಮದಲ್ಲಿ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೀದರ್: ಕೆರೆಯಲ್ಲಿ ಈಜಲು ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಮುಳುಗಿ ನೀರುಪಾಲಾಗಿರುವ ಘಟನೆ ಬಸವಕಲ್ಯಾಣ ತಾಲೂಕಿನ ಫುಲ್ದರ್ ವಾಡಿ ಗ್ರಾಮದಲ್ಲಿ ನಡೆದಿದೆ. 

ಮೃತ ವಿದ್ಯಾರ್ಥಿನಿಯರನ್ನು 15 ವರ್ಷದ ಸಕ್ಕುಬಾಯಿ ಸುರೇಶ ಮತ್ತು 15 ವರ್ಷದ ಚಾಂದನಿ ಬಾಬುರಾವ ಮೃತ ದುರ್ದೈವಿಗಳು. ಗ್ರಾಮದ ಬಳಿ ಇರುವ ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ಮುಳುಗಿ ಸಾವನ್ನಪ್ಪಿದ್ದಾರೆ.

ಬಾಲಕಿಯರು ಮುಳುಗುತ್ತಿರುವುದನ್ನು ಕಂಡ ಸ್ಥಳೀಯರು ಅವರ ರಕ್ಷಣೆಗೆ ಮುಂದಾದರೂ ಅಷ್ಟರಲ್ಲಾಗಲೇ ಇಬ್ಬರು ಮೃತಪಟ್ಟಿದ್ದಾರೆ. ಸದ್ಯ ಮೃತದೇಹಗಳನ್ನು ಹೊರತೆಗೆದಿದ್ದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com