ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆ ತಲುಪುವಂತೆ ಮಾಡಲು ವಿಶೇಷ ಗಮನ ನೀಡಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅರ್ಹ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆ ತಲುವಂತೆ ಮಾಡಲು ಸ್ಥಳೀಯ ಅಧಿಕಾರಿಗಳು ವಿಶೇಷ ಗಮನ ನೀಡಬೇಕೆಂದು  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಹೇಳಿದರು.
ನಗರದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಕೇಶ್ ಸಿಂಗ್ ಹಾಗೂ ತುಷಾರ್ ಗಿರಿನಾಥ್.
ನಗರದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಕೇಶ್ ಸಿಂಗ್ ಹಾಗೂ ತುಷಾರ್ ಗಿರಿನಾಥ್.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅರ್ಹ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆ ತಲುವಂತೆ ಮಾಡಲು ಸ್ಥಳೀಯ ಅಧಿಕಾರಿಗಳು ವಿಶೇಷ ಗಮನ ನೀಡಬೇಕೆಂದು  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಹೇಳಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಪಾಲಿಕೆಯ ಸರ್. ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ನಲ್ಲಿ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮಕ್ಕೆ ಆಡಳಿತಗಾರರಾದ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಚಾಲನೆ ನೀಡಿದರು. ಜತೆಗೆ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಶೈಲಜಾ, ಲೀಲಾ, ಲಲಿತಾ, ರಾಧ, ಗೌರಿ ಹಾಗೂ ಯಲ್ಲಮ್ಮ ಎಂಬುವವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಈ ವೇಳೆ ಮಾತನಾಡಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ₹2000 ನೀಡುವ ಯೋಜನೆ ಇದಾಗಿದೆ. ಸದ್ಯ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರೊಂದಿಗೆ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.

ಪೂರ್ವ, ಪಶ್ಚಿಮ, ದಕ್ಷಿಣ ವಲಯದಲ್ಲಿ ತಲಾ 44, ಬೊಮ್ಮನಹಳ್ಳಿಯಲ್ಲಿ 16, ಮಹದೇವಪುರದಲ್ಲಿ 17, ಯಲಹಂಕದಲ್ಲಿ 11, ದಾಸರಹಳ್ಳಿಯಲ್ಲಿ 8 ಹಾಗೂ ರಾಜರಾಜೇಶ್ವರಿ ನಗರ ವಲಯದಲ್ಲಿ 14 ಕಡೆಗಳಲ್ಲಿ ಕಾರ್ಯಕ್ರಮ ಪ್ರಸಾರ ಮಾಡಲಾಗಿದೆ. ಪ್ರತಿಯೊಂದು ವಾರ್ಡ್‌ಗೆ ನೋಡಲ್ ಅಧಿಕಾರಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com