ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿ ಮೇಲೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ

ಬುಧವಾರ ಇಲ್ಲಿ ಟ್ರೇಡ್ ಲೈಸೆನ್ಸ್ ನೀಡುವ ವಿಚಾರವಾಗಿ ಕಲಬುರಗಿ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಧನಶೆಟ್ಟಿ ಹೆಡಗಾಪುರಿ ಮೇಲೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕಲಬುರಗಿ: ಬುಧವಾರ ಇಲ್ಲಿ ಟ್ರೇಡ್ ಲೈಸೆನ್ಸ್ ನೀಡುವ ವಿಚಾರವಾಗಿ ಕಲಬುರಗಿ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಧನಶೆಟ್ಟಿ ಹೆಡಗಾಪುರಿ ಮೇಲೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಪಾಲಿಕೆ ಆವರಣದಲ್ಲಿ ಅಧಿಕಾರಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರಾತ್ರಿ ಬ್ರಹ್ಮಪುರಿ ಪೊಲೀಸ್ ಠಾಣೆಗೆ ಬಂದಾಗ ದಾಳಿಕೋರರು ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸದಂತೆ ಬೆದರಿಕೆಯೊಡ್ಡಿದ್ದಾರೆ ಆರೋಗ್ಯ ನಿರೀಕ್ಷಕರು ಆರೋಪಿಸಿದ್ದಾರೆ. 
ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ದಾಳಿಕೋರರಲ್ಲಿ ಒಬ್ಬಾತ ಪಾಲಿಕೆಯಿಂದ ವ್ಯಾಪಾರ ಪರವಾನಗಿಗಾಗಿ ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿದೆ. ಆಗಸ್ಟ್ 18ರಂದು ತೆರವು ಮಾಡಿದ ನಂತರ ತಾನು ಕಡತವನ್ನು ಸಂಬಂಧಿಸಿದ ಇಲಾಖೆಗೆ ವರ್ಗಾಯಿಸಿದ್ದೇನೆ ಎಂದು ಆರೋಗ್ಯ ನಿರೀಕ್ಷಕರು ಹೇಳಿದ್ದಾರೆ. 

ಪಾಲಿಕೆ ಉಪ ಆಯುಕ್ತ (ಅಭಿವೃದ್ಧಿ) ಆರ್ ಪಿ ಜಾಧವ್, ಕುಡಿದ ಅಮಲಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಎದುರೇ ಆರೋಗ್ಯ ನಿರೀಕ್ಷಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ ಪಾಟೀಲ್ ದೇವದಾಸ್, 'ಅವಿನಾಶ್ ಭಾಸ್ಕರ್ ಮತ್ತು ರಾಜು ಎಂಬ ಇಬ್ಬರು ವ್ಯಕ್ತಿಗಳು ಗುರುವಾರ ಸಂಜೆ ಕೆಎಂಪಿ ಕಚೇರಿಗೆ ಬಂದು ಕೆಎಂಪಿಯ ಆಹಾರ ನಿರೀಕ್ಷಕ ಧನಶೆಟ್ಟಿ ಅವರೊಂದಿಗೆ ಅನುಮತಿ ನೀಡುವಂತೆ ಜಗಳವಾಡಿದರು. ಜಗಳ ತಾರಕಕ್ಕೇರಿ ಧನಶೆಟ್ಟಿಯನ್ನು ಕೋಣೆಗೆ ಎಳೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಕೆಎಂಪಿ ಆಯುಕ್ತರು ತಿಳಿಸಿದ್ದಾರೆ.

ಅವಿನಾಶ್ ಮತ್ತು ಭಾಸ್ಕರ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಧನಶೆಟ್ಟಿಯ ಮಕ್ಕಳನ್ನು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದಾರೆ. ನಂತರ ಧನಶೆಟ್ಟಿ ಮತ್ತು ಕೆಲವರು ಠಾಣೆಗೆ ದೂರು ನೀಡಲು ತೆರಳಿದ್ದು, ಠಾಣೆಯ ಸುತ್ತಲಿನ ವಾತಾವರಣ ನೋಡಿ ದೂರು ದಾಖಲಿಸದೆ ವಾಪಸ್ಸಾದರು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com