ಆರೋಪಿ ಬಂಧನ (ಸಾಂದರ್ಭಿಕ ಚಿತ್ರ)
ರಾಜ್ಯ
ಆಯುರ್ವೇದದ ಸಿರಪ್ ಕುಡಿದು 5 ಸಾವು: ಮೂವರ ಬಂಧನ
ಗುಜರಾತ್ ನ ಖೇಡಾ ಜಿಲ್ಲೆಯಲ್ಲಿ ಆಯುರ್ವೇದದ ಸಿರಪ್ ಕುಡಿದು 5 ಮಂದಿ ಸಾವನ್ನಪ್ಪಿದ ಪ್ರಕರಣದ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಅಹ್ಮದಾಬಾದ್: ಗುಜರಾತ್ ನ ಖೇಡಾ ಜಿಲ್ಲೆಯಲ್ಲಿ ಆಯುರ್ವೇದದ ಸಿರಪ್ ಕುಡಿದು 5 ಮಂದಿ ಸಾವನ್ನಪ್ಪಿದ ಪ್ರಕರಣದ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಬಂಧಿತರ ಪೈಕಿ ಇಬ್ಬರು ದಿನಸಿ ವ್ಯಾಪಾರಿಗಳಾಗಿದ್ದು, ತಮ್ಮ ಅಂಗಡಿಯಲ್ಲಿ ಮೆಥನಾಲ್ ಹೊಂದಿರುವ ಆಯುರ್ವೇದ ಸಿರಪ್ ನ್ನು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಈ ಆಯುರ್ವೇದ ಸಿರಪ್ ಬಾಟಲ್ ಗಳನ್ನು ಪೂರೈಕೆ ಮಾಡುತ್ತಿದ್ದ ಇನ್ನಿಬ್ಬರನ್ನು ಇನ್ನಷ್ಟೇ ಬಂಧಿಸಬೇಕಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಅಂಗಡಿ ಸಿರಪ್‌ನ ಬಾಟಲಿಗಳನ್ನು ಕನಿಷ್ಠ 50 ಜನರಿಗೆ ಮಾರಾಟ ಮಾಡಿದೆ.
ಪ್ರಕರಣದ ತನಿಖೆಗಾಗಿ ಉಪ ಪೊಲೀಸ್ ವರಿಷ್ಠಾಧಿಕಾರಿ ನಾಡಿಯಾಡ್ ನೇತೃತ್ವದಲ್ಲಿ 5 ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ ಎಂದು ಖೇಡಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಗಧಿಯಾ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ