ನಾಳೆಯಿಂದ ಬೆಳಗಾವಿ ಅಧಿವೇಶನ: ಸಭಾಧ್ಯಕ್ಷ, ಸಭಾಪತಿಯಿಂದ ಸಿದ್ಧತೆ ಪರಿಶೀಲನೆ

ನಾಳೆಯಿಂದ 10 ದಿನಗಳ ವರಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಯಲಿರುವ ವಿಧಾನ ಮಂಡಲ ಚಳಿಗಾಲ ಅಧಿವೇಶನದ ಸಿದ್ಧತೆಯನ್ನು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ  ಇಂದು ಜಂಟಿಯಾಗಿ ಪರಿಶೀಲನೆ ನಡೆಸಿದರು. 
ಬೆಳಗಾವಿ ಸುವರ್ಣ ಸೌಧ
ಬೆಳಗಾವಿ ಸುವರ್ಣ ಸೌಧ

ಬೆಳಗಾವಿ: ನಾಳೆಯಿಂದ 10 ದಿನಗಳ ವರಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಯಲಿರುವ ವಿಧಾನ ಮಂಡಲ ಚಳಿಗಾಲ ಅಧಿವೇಶನದ ಸಿದ್ಧತೆಯನ್ನು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ  ಇಂದು ಜಂಟಿಯಾಗಿ ಪರಿಶೀಲನೆ ನಡೆಸಿದರು. 

ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ಆಸನಗಳ ವ್ಯವಸ್ಥೆ, ಧ್ವನಿ ವ್ಯವಸ್ಥೆ ಸೇರಿದಂತೆ ಪರೀಕ್ಷಿಸಿದ ಅವರು, ಯಾವುದೇ ತಾಂತ್ರಿಕ ತೊಂದರೆಯುಂಟಾಗದಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು. ವಿಧಾನಸಭೆ ಮತ್ತು ವಿಧಾನ ಪರಿಷತ್ ನ ಕಾರ್ಯದರ್ಶಿ ಸೇರಿದಂತೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಂತರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಭಾಧ್ಯಕ್ಷ ಯು ಟಿ ಖಾದರ್,  ಬೆಳಗಾವಿ ಅಧಿವೇಶನದಲ್ಲಿ ನಾಡಿನ ಜ್ವಲಂತ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕುರಿತು ಅರ್ಥಪೂರ್ಣ ಚೆರ್ಚೆಗೆ ಉತ್ತಮ ಅವಕಾಶ ಕಲ್ಪಿಸಲಾಗುವುದು, ಉತ್ತರ ಕರ್ನಾಟಕದ ಸಮಸ್ಯೆಗಳನ್ನೂ ಚರ್ಚೆಗೆ ಅವಕಾಶ ನೀಡಲಾಗುವುದು ಎಂದರು. 

ಸದ್ಯ ಮೂರು ಬಿಲ್ಲುಗಳ ಬಂದಿವೆ. ಅವುಗಳ ಬಗ್ಗೆ ಚರ್ಚೆ ನಡೆಸಿ ಅನುಮೋದಿಸಲಾಗುವುದು, ಕಲಾಪ ವೀಕ್ಷಣೆಗೆ ಬರುವ ಶಾಲಾ ಮಕ್ಕಳಿಗೆ ವಿಶೇಷ ಅವಕಾಶ ಕಲ್ಪಿಸಲಾಗುವುದು. ಕಲಾಪ ವೀಕ್ಷಣೆಯ ಮುಂಚೆ ಅವರೊಂದಿಗೆ ಸಂವಿಧಾನ ಹಾಗೂ ರಾಜಕೀಯ ಆಡಳಿತಾತ್ಮಕ ಆಶೋತ್ತರ ಬಗ್ಗೆ ಸಂವಾದ ನಡೆಸಲು ವ್ಯವಸ್ಥೆ ಮಾಡಲಾಗುವುದು. ಸುವರ್ಣ ಸಂಭ್ರಮದ ಹಿನ್ನಲೆಯಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಿಳಿಸಿದರು. 

ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ಪ್ರತಿಭಟನೆ ಕಡಿಮೆಗೊಳಿಸಿ ಸಮಸ್ಯೆಗಳ ನಿವಾರಣೆಗೆ ಆದ್ಯತೆ ನೀಡುವು ಪ್ರಯತ್ನ ನಡೆದಿದೆ.‌ 207 ಪ್ರಶ್ನೆಗಳಿಗೆ ಅವಕಾಶ ನೀಡಲಾಗಿದೆ. ಉಳಿದಂತೆ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಇತರ ವಿಷಯಗಳ ಚರ್ಚೆಗೆ ಅವಕಾಶ ನೀಡಲಾಗುವುದು. ಉತ್ತರ ಕರ್ನಾಟಕದ ಚರ್ಚೆಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com