'ಗ್ಯಾರಂಟಿ' ಮೋಸ ಎನ್ನುವುದು ಸಾಬೀತಾಗಿದೆ; ಬಿಜೆಪಿಗೆ ಮತ ನೀಡಿ ಜನ ಮೋದಿ ಬೆಂಬಲಿಸಿದ್ದಾರೆ: ಶೋಭಾ ಕರಂದ್ಲಾಜೆ

3 ರಾಜ್ಯಗಳ ಜನರು ಬಿಜೆಪಿಗೆ  ಮತ ನೀಡಿ ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಿದ್ದಾರೆ. ಕಾಂಗ್ರೆಸ್‌ನವರ ಗ್ಯಾರಂಟಿ ಅದು ಗ್ಯಾರಂಟಿ ಅಲ್ಲ, ಮೋಸ ಎನ್ನುವುದು ಸಾಬೀತಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ

ನವದೆಹಲಿ: 3 ರಾಜ್ಯಗಳ ಜನರು ಬಿಜೆಪಿಗೆ  ಮತ ನೀಡಿ ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಿದ್ದಾರೆ. ಕಾಂಗ್ರೆಸ್‌ನವರ ಗ್ಯಾರಂಟಿ ಅದು ಗ್ಯಾರಂಟಿ ಅಲ್ಲ, ಮೋಸ ಎನ್ನುವುದು ಸಾಬೀತಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

5 ರಾಜ್ಯಗಳ ಪೈಕಿ 3 ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲ ನವದೆಹಲಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವೆ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲೂ ಬಿಜೆಪಿಗೆ ಐತಿಹಾಸಿಕ ಜಯ ಸಿಕ್ಕಿದೆ. ಜನರು ಕಾಂಗ್ರೆಸ್‌ನ ಸುಳ್ಳು ಗ್ಯಾರಂಟಿಗಳನ್ನು ನಂಬಲ್ಲ ಎನ್ನುವುದು ಸಾಬೀತಾಗಿದೆ. ಇದಕ್ಕಾಗಿ ನಮ್ಮ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆ ಎಂದರು.

ಇನ್ನು ಮುಂದೆ ತೆಲಂಗಾಣ ಸೇರಿ ಹಲವು ದಕ್ಷಿಣ ಭಾರತದ ರಾಜ್ಯಗಳಲ್ಲಿ ನಮ್ಮ ಸಂಘಟನೆ ಬಲಪಡಿಸಬೇಕಿದೆ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com