ಪೊಲೀಸ್-ವಕೀಲರ ಸಂಘರ್ಷ: ಮಧ್ಯಸ್ಥಿಕೆ ವಹಿಸುವಂತೆ ಸಿಎಂಗೆ ಬೊಮ್ಮಾಯಿ ಆಗ್ರಹ

ಚಿಕ್ಕಮಗಳೂರು ಜಿಲ್ಲೆಯಲ್ಲಿ ವಕೀಲರೊಬ್ಬರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಮತ್ತು ಪೊಲೀಸ್ ಸಿಬ್ಬಂದಿ ನಿರಂತರ ಧರಣಿ ನಡೆಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಕರಣ ಸಂಬಂಧ ಮಧ್ಯಸ್ಥಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ವಕೀಲರೊಬ್ಬರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಮತ್ತು ಪೊಲೀಸ್ ಸಿಬ್ಬಂದಿ ನಿರಂತರ ಧರಣಿ ನಡೆಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಕರಣ ಸಂಬಂಧ ಮಧ್ಯಸ್ಥಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಟ್ವೀಟ್ ಮಾಡಿರುವ ಅವರು, ಚಿಕ್ಕಮಗಳೂರಿನಲ್ಲಿ ಪೋಲಿಸರೇ ಪ್ರತಿಭಟನೆ ಮಾಡುತ್ತಿದ್ದು, ವಕೀಲರೂ ಪೊಲೀಸರ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ವಕೀಲರು ಮತ್ತು ಪೊಲೀಸರ ನಡುವೆ ಸಂಘರ್ಷ ಆಗುತ್ತಿರುವುದು ಒಂದು ಆತಂಕಕಾರಿ ಬೆಳವಣಿಗೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಗೃಹ ಇಲಾಖೆಯ ಮೇಲೆ ಸರ್ಕಾರದ ಮತ್ತು ಅಧಿಕಾರಿಗಳ ನಿಯಂತ್ರಣ ತಪ್ಪಿದೆ‌ ಎಂದು ಹೇಳಿದ್ದಾರೆ.

ಗೃಹ ಇಲಾಖೆಯು ಈ ರೀತಿ ಅಶಿಸ್ತು ತೋರುತ್ತಿರುವುದು ಒಂದು ಗಂಭೀರವಾದ ವಿಚಾರ, ಸರ್ಕಾರ ಈ ಕೂಡಲೇ ಇದನ್ನು ಸರಿಪಡಿಸದಿದ್ದರೆ ರಾಜ್ಯದಲ್ಲಿ  ಉಂಟಾಗುವ ಅರಾಜಕತೆಗೆ ಕಾರಣವಾಗುತ್ತೆ‌. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ಮಧ್ಯ ಪ್ರವೇಶಿಸಿ ಕಾನೂನು ಎಲ್ಲರೂ ಪಾಲಿಸಬೇಕು ಅನ್ನುವ ವಾತಾವರಣ ಮೂಡಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸುತ್ತೇನೆಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com