ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿಯ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಲಾಗಿದೆ. 13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅದರಲ್ಲಿ ಬೆಂಗಳೂರಿನಲ್ಲಿ 3 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಇನ್ನು ಮುಖ್ಯವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ನಿಯ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ.
ಡಾ ಪ್ರಭಲಿಂಗ ಮಾನಕರ್ ಯಾದಗಿರಿ ಡಿಎಚ್ ಓ ಆಗಿರುವ ಡಾ ಪ್ರಭುಲಿಂಗ್ ಮಾನಕರ್ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ನಿವಾಸದಲ್ಲಿ ಶೋಧ ನಡೆಸಿದ್ದಾರೆ.
ಈ ಹಿಂದೆ ಕಲಬುರಗಿಯ ಆರ್‌ಸಿಎಚ್ ಆಗಿದ್ದು, ಈಗ ಯಾದಗಿರಿಯ ಡಿಎಚ್ಒ ಆಗಿರುವ ಡಾ.ಪ್ರಭುಲಿಂಗ ಮಾನಕರ ಅವರ ಕಲಬುರಗಿಯ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜತೆಗೆ ಯಾದಗಿರಿಯ ಮನೆ, ಕಚೇರಿ ಹಾಗೂ ಕಲಬುರಗಿ ಸಮೀಪದ ಫಾರ್ಮ್ ಹೌಸ್ ಮೇಲೂ ಲೋಕಾಯುಕ್ತ ಎಸ್ ಪಿ ಕರ್ನೂಲ್ ನೇತೃತ್ವದ ತಂಡ ದಾಳಿ ನಡೆಸಿದ್ದು, ದಾಖಲೆಗಳ ತಪಾಸಣೆ ನಡೆಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ