ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗಾಗಿ 100 ಹೊಸ ಹಾಸ್ಟೆಲ್‌ ತೆರೆಯಲು ಸರ್ಕಾರ ಚಿಂತನೆ

​ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಹೆಚ್ಚಿನ ಹಾಸ್ಟೆಲ್‌ಗಳ ಬೇಡಿಕೆ ಇರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲು 100 ಹೊಸ ಹಾಸ್ಟೆಲ್‌ಗಳನ್ನು ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ಕೇಂದ್ರಗಳಾದ ಮಂಗಳೂರು, ಉಡುಪಿ, ಧಾರವಾಡ ಮತ್ತು ಇತರ ಜಿಲ್ಲಾ ಕೇಂದ್ರಗಳಲ್ಲಿ ಹಾಸ್ಟೆಲ್‌ಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ
ಶಿವರಾಜ್ ತಂಗಡಗಿ
ಶಿವರಾಜ್ ತಂಗಡಗಿ
Updated on

ಬೆಂಗಳೂರು: ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಹೆಚ್ಚಿನ ಹಾಸ್ಟೆಲ್‌ಗಳ ಬೇಡಿಕೆ ಇರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲು 100 ಹೊಸ ಹಾಸ್ಟೆಲ್‌ಗಳನ್ನು ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಸಮಸ್ಯೆ ಕರ್ನಾಟಕದಾದ್ಯಂತ ಪ್ರಚಲಿತದಲ್ಲಿರುವುದರಿಂದ ಮಧ್ಯಂತರ ಪರಿಹಾರಕ್ಕೆ ಮುಂದಾಗದೆ, ಸಮಸ್ಯೆ ಬಗೆಹರಿಸಲು ದೀರ್ಘಾವಧಿ ಯೋಜನೆ ರೂಪಿಸುವಂತೆ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಸರ್ಕಾರಕ್ಕೆ ಸೂಚಿಸಿದರು.

ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರಿಗೆ ಉತ್ತರಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ, ಒಬಿಸಿ ಸಮುದಾಯದ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳದ ಹಿನ್ನೆಲೆಯಲ್ಲಿ ಈಗಿರುವ ಹಾಸ್ಟೆಲ್‌ಗಳಲ್ಲಿ ಅವರಿಗೆ ವಸತಿ ಕಲ್ಪಿಸಲು ತೊಂದರೆಯಾಗುತ್ತಿದೆ ಎಂಬುದನ್ನು ಒಪ್ಪಿಕೊಂಡರು. ಇದು ಇಲಾಖೆಯ ಗಮನಕ್ಕೂ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೂ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ವಿಶೇಷವಾಗಿ ಶೈಕ್ಷಣಿಕ ಕೇಂದ್ರಗಳಾದ ಮಂಗಳೂರು, ಉಡುಪಿ, ಧಾರವಾಡ ಮತ್ತು ಇತರ ಜಿಲ್ಲಾ ಕೇಂದ್ರಗಳಲ್ಲಿ ಇನ್ನೂ 100 ಹಾಸ್ಟೆಲ್‌ಗಳನ್ನು ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಹಾಸ್ಟೆಲ್ ಸೌಲಭ್ಯ ಪಡೆಯದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿದ್ಯಾಸಿರಿ ಯೋಜನೆಗೆ ಸರ್ಕಾರ 30 ಕೋಟಿ ರೂ. ಗಳನ್ನು ಮಂಜೂರು ಮಾಡಿರುವುದರಿಂದ ಅವರಿಗೆ 10 ತಿಂಗಳಿಗೆ ಮಾಸಿಕ 1,500 ರೂ. ನೀಡಲಾಗುತ್ತದೆ. ಶೈಕ್ಷಣಿಕ ವರ್ಷ ಪ್ರಾರಂಭವಾಗುವುದರೊಂದಿಗೆ ಜೂನ್‌ನಲ್ಲಿಯೇ ಹಾಸ್ಟೆಲ್‌ಗಳನ್ನು ತೆರೆಯಲು ಚಿಂತಿಸಲಾಗಿದೆ. ಕೋವಿಡ್ -19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಶೈಕ್ಷಣಿಕ ಕ್ಯಾಲೆಂಡರ್‌ನಲ್ಲಿನ ಬದಲಾವಣೆಯಿಂದಾಗಿ ವಿಳಂಬವಾಗಿದೆ ಎಂದು ಸಚಿವರು ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com