ಇನ್ನೂ 50 ಡಯಾಲಿಸಿಸ್ ಕೇಂದ್ರ ತೆರೆಯಲು ರಾಜ್ಯ ಸರ್ಕಾರ ಮುಂದು!
ಬೆಳಗಾವಿ: ಡಯಾಲಿಸಿಸ್ ಕೇಂದ್ರಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಹೊಸ ಸೇವಾ ಏಜೆನ್ಸಿಗಳನ್ನು ನೇಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ , ಹಿಂದಿನ ಏಜೆನ್ಸಿಗಳ ಒಪ್ಪಂದದ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಹೊಸ ಏಜೆನ್ಸಿಗಳನ್ನು ನೇಮಿಸಲು ಸರ್ಕಾರ ಹೊಸ ಟೆಂಡರ್‌ಗಳನ್ನು ಕರೆದಿದೆ ಎಂದರು.
"ಡಯಾಲಿಸಿಸ್ ಕೇಂದ್ರಗಳ ಸಂಖ್ಯೆಯನ್ನು 169 ರಿಂದ 219 ಕ್ಕೆ ಹೆಚ್ಚಿಸಲಾಗುವುದು. ಡಯಾಲಿಸಿಸ್ ಯಂತ್ರಗಳ ಸಂಖ್ಯೆಯನ್ನು 649 ರಿಂದ 800 ಕ್ಕೆ ಹೆಚ್ಚಿಸಲಾಗುವುದು, 57 ಹೊಸ ತಾಲೂಕುಗಳಲ್ಲಿನ 48 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹೊಸ ಕೇಂದ್ರಗಳು ಬರಲಿವೆ ಎಂದು ಅವರು ಹೇಳಿದರು.
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ರೋಗಿಗಳು ತಮ್ಮ ಆರೋಗ್ಯ ಕಾರ್ಡ್ ಬಳಸಿ ಡಯಾಲಿಸಿಸ್ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಮಾಡಿದ ಮನವಿಯನ್ನು ಪರಿಗಣಿಸುವುದಾಗಿ ದಿನೇಶ್ ಗುಂಡೂರಾವ್ ಸದನಕ್ಕೆ ತಿಳಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ