ನಾಗಮೋಹನ್ ದಾಸ್ ಸಮಿತಿಗೆ 6,000 ಪುಟಗಳ ದಾಖಲೆ ಸಲ್ಲಿಸಿದ ಕೆಂಪಣ್ಣ

ರಾಜ್ಯದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ ಗುತ್ತಿಗೆದಾರರ ಬಿಲ್ ಪಾವತಿಸಲು ಶೇ. 40 ರಷ್ಟು ಕಮಿಷನ್ ಆರೋಪದ ಬೇಡಿಕೆ ಪುಷ್ಟಿಕರಿಸಲು ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಮತ್ತು ಸಂಘದ ಇತರ ಪದಾಧಿಕಾರಿಗಳು ಗುರುವಾರ ನ್ಯಾಯಮೂರ್ತಿ ನಾಗಮೋಹನ್ ನೇತೃತ್ವದ ಸಮಿತಿಗೆ 6,000 ಪುಟಗಳ ದಾಖಲೆಗಳನ್ನು ಸಲ್ಲಿಸಿದ್ದಾರೆ.
ನ್ಯಾ. ನಾಗಮೋಹನ್ ದಾಸ್
ನ್ಯಾ. ನಾಗಮೋಹನ್ ದಾಸ್

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ ಗುತ್ತಿಗೆದಾರರ ಬಿಲ್ ಪಾವತಿಸಲು ಶೇ. 40 ರಷ್ಟು ಕಮಿಷನ್ ಆರೋಪದ ಬೇಡಿಕೆ ಪುಷ್ಟಿಕರಿಸಲು ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಮತ್ತು ಸಂಘದ ಇತರ ಪದಾಧಿಕಾರಿಗಳು ಗುರುವಾರ ನ್ಯಾಯಮೂರ್ತಿ ನಾಗಮೋಹನ್ ನೇತೃತ್ವದ ಸಮಿತಿಗೆ 6,000 ಪುಟಗಳ ದಾಖಲೆಗಳನ್ನು ಸಲ್ಲಿಸಿದ್ದಾರೆ.

ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಕೆಂಪಣ್ಣ, ಪ್ರಸ್ತುತ ಕಾಂಗ್ರೆಸ್ ಸರ್ಕಾರದ ವಿರುದ್ಧದ ತಮ್ಮ ಆರೋಪಕ್ಕೆ ಪೂರಕವಾದ ದಾಖಲೆಗಳನ್ನೂ ಸಲ್ಲಿಸಿದ್ದೇವೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಅವಧಿಯಲ್ಲಿನ ಶೇ. 40 ರಷ್ಟು ಕಮಿಷನ್ ಆರೋಪ ತನಿಖೆಗಾಗಿ ಆಗಸ್ಟ್ ನಲ್ಲಿ ಸಮಿತಿಯನ್ನು ರಚಿಸಲಾಗಿದೆ.  ಲೋಕೋಪಯೋಗಿ, ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತಿತರ ಇಲಾಖೆ ಹಾಗೂ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿನ ಬಿಲ್‌ಗಳು ಮತ್ತು ಕಾಮಗಾರಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿರುವುದಾಗಿ ಕೆಂಪಣ್ಣ ತಿಳಿಸಿದರು. 

ಸಂಘವು ಆರ್‌ಟಿಐ ಉತ್ತರಕ್ಕಾಗಿ ಕಾಯುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ಇನ್ನೂ ಕೆಲವು ದಾಖಲೆಗಳನ್ನು ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರಿಗೆ ಸಲ್ಲಿಸಲಾಗುವುದು. ಸಮಿತಿಗೆ ಸಲ್ಲಿಸಿದ ದಾಖಲೆಗಳ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ . ಹಿಂದಿನ ಸರ್ಕಾರದ ವಿರುದ್ಧ ತಮ್ಮ ಆರೋಪವನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳನ್ನು ಸಲ್ಲಿಸಿಲ್ಲ ಎಂಬ ಆರೋಪ ತಮ್ಮ ಮೇಲಿತ್ತು.ಆದರೆ ಈಗ ನಾವು 6,000 ಪುಟಗಳ ದಾಖಲೆಗಳನ್ನು ಆಯೋಗಕ್ಕೆ ಸಲ್ಲಿಸಿದ್ದೇವೆ ಎಂದು ಅವರು ಹೇಳಿದರು.

ಹಿಂದಿನ ಸರ್ಕಾರದ ಮೇಲೆ ಶೇ.40ರಷ್ಟು ಕಮಿಷನ್ ಆರೋಪದ ಬಗ್ಗೆ ಪ್ರಸ್ತಾಪಿಸಿದ ಕೆಂಪಣ್ಣ, ಈಗಿನ ಕಾಂಗ್ರೆಸ್ ಸರ್ಕಾರದಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು. “ಈ ಸರ್ಕಾರವು ಕೆಲವೇ ತಿಂಗಳುಗಳಾಗಿರುವುದರಿಂದ, ಕಮಿಷನ್ ಶೇಕಡಾವಾರು ಬಹಿರಂಗಪಡಿಸುವುದು ಕಷ್ಟ. ನಮ್ಮ ಸಂಘವು ಯಾವುದೇ ರಾಜಕೀಯ ಪಕ್ಷ ಅಥವಾ ಸರ್ಕಾರದ ಪರ ಅಥವಾ ವಿರುದ್ಧವಾಗಿಲ್ಲ ಎಂದು ಅವರು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com