ಎಸ್.ಸಿ.ಎಸ್.ಪಿ/ಟಿ.ಎಸ್‌.ಪಿ ಯೋಜನೆಯ ಅನುದಾನದ ದುರ್ಬಳಕೆಗೆ ಅವಕಾಶ ನೀಡುವುದಿಲ್ಲ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ

ರಾಜ್ಯ ಸರ್ಕಾರ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಗೆ ಮೀಸಲಿಟ್ಟಿರುವ ಅನುದಾನವನ್ನು ಯಾವುದೇ ಕಾರಣಕ್ಕೂ ದುರ್ಬಳಕೆ ಆಗಲು ಅವಕಾಶ ನೀಡುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ವಿಧಾನಪರಿಷತ್ತಿನಲ್ಲಿಂದು ಸ್ಪಷ್ಪಪಡಿಸಿದರು.
ಡಾ.ಹೆಚ್. ಸಿ. ಮಹಾದೇವಪ್ಪ
ಡಾ.ಹೆಚ್. ಸಿ. ಮಹಾದೇವಪ್ಪ
Updated on

ಬೆಳಗಾವಿ: ರಾಜ್ಯ ಸರ್ಕಾರ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಗೆ ಮೀಸಲಿಟ್ಟಿರುವ ಅನುದಾನವನ್ನು ಯಾವುದೇ ಕಾರಣಕ್ಕೂ ದುರ್ಬಳಕೆ ಆಗಲು ಅವಕಾಶ ನೀಡುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ವಿಧಾನಪರಿಷತ್ತಿನಲ್ಲಿಂದು ಸ್ಪಷ್ಪಪಡಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಛಲವಾದಿ ಟಿ ನಾರಾಯಣ ಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಧಿನಿಯಮ 2013 ಮತ್ತು 2017ರ ನಿಯಮದಂತೆ  ಪ.ಜಾತಿ ಮತ್ತು ಪಂಗಡದ ಜನರಿಗೆ ನೇರವಾಗಿ ಪ್ರಯೋಜನವಾಗುವ ಕಾರ್ಯಕ್ರಮಗಳಿಗೆ  ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನವನ್ನು ಹಂಚಿಕೆ ಮಾಡಿ ಅನುಷ್ಠಾನಗೊಳಿಸಲು ಅವಕಾಶವಿದ್ದು,  ಈ ಅನುದಾನವನ್ನು ಯಾವುದೇ ಸಂದರ್ಭದಲ್ಲೂ ಅನ್ಯ ಉದ್ದೇಶಕ್ಕಾಗಿ ಬಳಸುವುದಿಲ್ಲ ಹಾಗೂ ಕಾಯ್ದೆಯ ಉಲ್ಲಂಘನೆಯ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು. 

ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ ಯೋಜನೆಗೆ 5, 075 ಕೋಟಿ ರೂ, ಅನ್ನಭಾಗ್ಯ ಯೋಜನೆಗೆ 2, 779.50 ಕೋಟಿ ರೂ, ಗೃಹಜ್ಯೋತಿ ಯೋಜನೆಯಡಿ 2, 410 ಕೋಟಿ ರೂ, ಶಕ್ತಿ ಯೋಜನೆಗೆ 812 ಕೋಟಿ ರೂ, ಯುವನಿಧಿ ಯೋಜನಗೆಗೆ 67.50 ಕೋಟಿ ರೂ ಒದಗಿಸಲಾಗಿದ್ದು, ಈ ಮೊತ್ತವನ್ನು ಪ.ಜಾತಿ/ಪಂಗಡದವರಿಗೆ ಉಪಯೋಗಿಸುತ್ತಿರುವುದರಿಂದ ಸದರಿ ಅನುದಾನದ ದುರ್ಬಳಕೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ತಿಳಿಸಿದರು.

ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನದಲ್ಲಿ ದುರ್ಬಳಕೆ ತಡೆಯುವ ಉದ್ದೇಶದಿಂದಲೇ ಕಾಯ್ದೆಯ ಸೆಕ್ಷನ್ 7 (ಡಿ) ಯನ್ನು ಕೈಬಿಡಲು ನಿನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದರು. 

ಪ.ಜಾತಿ ಮತ್ತು ಪ.ವರ್ಗಗಳ ಕಲ್ಯಾಣಕ್ಕಾಗಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಲ್ಲಿ ಮೀಸಲಿಟ್ಟ ಅನುದಾನದಲ್ಲಿ 2023-24 ನೇ ಸಾಲಿನಲ್ಲಿ 11 ಸಾವಿರ ಕೋಟಿಗೂ ಅಧಿಕ ಮೊತ್ತವನ್ನು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದೆ ಎಂಬ ವಿಧಾನಪರಿಷತ್ ಸದಸ್ಯ ಛಲವಾದಿ ಟಿ ನಾರಾಯಣ ಸ್ವಾಮಿ ಅವರ ಪ್ರಶ್ನೆಗೆ ಪೂರಕವಾಗಿ ಸದಸ್ಯರಾದ ತೇಜಸ್ವಿನಿಗೌಡ, ಭೋಜೇಗೌಡ, ಕೋಟ ಶ್ರೀನಿವಾಸ ಪೂಜಾರಿ, ತಿಪ್ಪೇಸ್ವಾಮಿ, ಶಾಂತಾರಾಮ್, ರವಿಕುಮಾರ್ ದನಿಗೂಡಿಸಿದರು. 

ಸರ್ಕಾರದ ಉತ್ತರ ಕುರಿತು ಆಕ್ಷೇಪ ವ್ಯಕ್ತಪಡಿಸಿದ ವಿರೋಧ ಪಕ್ಷಗಳ ಸದಸ್ಯರು ಸದನದ ಬಾವಿಗಳಿದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಸದನವನ್ನು 2 ಬಾರಿ 10 ನಿಮಿಷಗಳ ಕಾಲ ಮುಂದೂಡಲಾಯಿತು. ಅಂತಿಮವಾಗಿ ಈ ಕುರಿತು ಸೋಮವಾರ ಅರ್ಧ ಗಂಟೆಯ ಚರ್ಚೆಗೆ ಅವಕಾಶ ನೀಡುವುದಾಗಿ ಸಭಾಪತಿಗಳು ಅನುಮತಿ ನೀಡುವ ಮೂಲಕ ವಿರೋಧಪಕ್ಷಗಳ ಪ್ರತಿಭಟನೆಯನ್ನು ತಣ್ಣಗಾಗಿಸಿದರು. ಸರ್ಕಾರದ ಪರವಾಗಿ ಸಚಿವ ಪ್ರಿಯಾಂಕ ಖರ್ಗೆ, ಕೆ.ಎಚ್. ಮುನಿಯಪ್ಪ ಮಾತನಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com