ಶಿವಮೊಗ್ಗ ಸರ್ಕಾರಿ ಶಾಲೆಯಲ್ಲಿ ಲೈಂಗಿಕ ಕಿರುಕುಳ: ಮುಖ್ಯ ಉಪಾಧ್ಯಾಯ, ಶಿಕ್ಷಕ ಅಮಾನತು

ಶಿವಮೊಗ್ಗ ಸರ್ಕಾರಿ ಶಾಲೆಯಲ್ಲಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಶಾಲೆಯ ಮುಖ್ಯ ಉಪಾಧ್ಯಾಯ, ಶಿಕ್ಷಕನನ್ನು ಅಮಾತುಗೊಳಿಸಲಾಗಿದೆ.
ಅಮಾನತು (ಸಾಂಕೇತಿಕ ಚಿತ್ರ)
ಅಮಾನತು (ಸಾಂಕೇತಿಕ ಚಿತ್ರ)

ಶಿವಮೊಗ್ಗ: ಶಿವಮೊಗ್ಗ ಸರ್ಕಾರಿ ಶಾಲೆಯಲ್ಲಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಶಾಲೆಯ ಮುಖ್ಯ ಉಪಾಧ್ಯಾಯ, ಶಿಕ್ಷಕನನ್ನು ಅಮಾತುಗೊಳಿಸಲಾಗಿದೆ.

ಸೊಪ್ಪಿನಕೇರಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು,  9-12 ವಯಸ್ಸಿನ ವಿದ್ಯಾರ್ಥಿನಿಯರಿಗೆ ಕಳೆದ ಕೆಲವು ತಿಂಗಳುಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಶಿಕ್ಷಕನ ವಿರುದ್ಧ ಕೇಳಿಬಂದಿತ್ತು

ಶಿಕ್ಷಕನ ಕೃತ್ಯದ ಬಗ್ಗೆ ಮುಖ್ಯೋಪಾಧ್ಯಾಯರಿಗೆ ದೂರು ನೀಡಿದರೂ ಸಹ ಆತನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಡಿಸೆಂಬರ್ 5 ರಂದು ಈ ವಿಷಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದ ನಂತರ ಶಿಕ್ಷಕನ ವಿರುದ್ಧದ ಆರೋಪಗಳ ಬಗ್ಗೆ ವಿವರವಾದ ತನಿಖೆಯನ್ನು ಕೈಗೆತ್ತಿಕೊಳ್ಳಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಪಾಲಕರು ಹಾಗೂ ಶಾಲಾಭಿವೃದ್ಧಿ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರಿಂದ ಬಂದ ದೂರು ಆಧರಿಸಿ ತನಿಖೆಗೆ ಆದೇಶಿಸಲಾಗಿದೆ ಎಂದು ಶಿವಮೊಗ್ಗ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ ತಿಳಿಸಿದ್ದಾರೆ.

ಶಿಕಾರಿಪುರ ಬ್ಲಾಕ್ ಶಿಕ್ಷಣಾಧಿಕಾರಿ ಸಲ್ಲಿಸಿದ ಪ್ರಾಥಮಿಕ ವರದಿ ಆಧರಿಸಿ ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ.

ಆರೋಪಿ ಶಿಕ್ಷಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ವಿಷಯ ತಿಳಿದಿದ್ದರೂ ಯಾವುದೇ ಉನ್ನತ ಅಧಿಕಾರಿಗಳಿಗೆ ವರದಿ ಮಾಡಿಲ್ಲದೇ ಇರುವುದು ವಿದ್ಯಾರ್ಥಿಗಳ ಕಿರುಕುಳದಲ್ಲಿ ಭಾಗಿಯಾಗದ ಮುಖ್ಯೋಪಾಧ್ಯಾಯರ ಮೇಲಿನ ಆರೋಪವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಮುಖ್ಯಶಿಕ್ಷಕರು ವಿಷಯವನ್ನು ಹತ್ತಿಕ್ಕಲು ಪ್ರಯತ್ನಿಸಿದರು, ಅದಕ್ಕಾಗಿಯೇ ಘಟನೆಗೆ ಸಂಬಂಧಿಸಿದಂತೆ ಅವರನ್ನು ಅಮಾನತುಗೊಳಿಸಲಾಗಿದೆ. ವಿವರವಾದ ತನಿಖೆ ನಡೆಯುತ್ತಿದೆ" ಎಂದು ಪರಮೇಶ್ವರಪ್ಪ ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳ ಪ್ರಕಾರ, ಶಾಲಾ ಅಭಿವೃದ್ಧಿ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಿರಿಯ ಅಧಿಕಾರಿಯನ್ನು ಸಂಪರ್ಕಿಸಿದ್ದಾರೆ. ಡಿಸೆಂಬರ್ 9 ರಂದು ಆರೋಪಿ ಶಿಕ್ಷಕನ ವಿರುದ್ಧ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಈ ವಿಷಯವನ್ನು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯುಸಿ) ಗೂ ತಿಳಿಸಲಾಗಿದೆ.

ಪೊಲೀಸ್ ತನಿಖೆಯ ಭಾಗವಾಗಿ, ವಿದ್ಯಾರ್ಥಿನಿಯರ ಹೇಳಿಕೆಗಳನ್ನು ದಾಖಲಿಸಲಾಗಿದೆ ಮತ್ತು ಸಂತ್ರಸ್ತರ ವೈದ್ಯಕೀಯ ಪರೀಕ್ಷೆಯನ್ನು ಮಾಡಲಾಗಿದೆ. ಸಿಡಬ್ಲ್ಯುಸಿ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com