ರಾಜ್ಯದಲ್ಲಿ 34,115 ಕೋಟಿ ರೂ. ಹೂಡಿಕೆಗೆ ಅನುಮೋದನೆ; 14 ಉದ್ಯಮ ಸ್ಥಾಪನೆ, 13,308 ಉದ್ಯೋಗ ಸೃಷ್ಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿ ಸಭೆಯಲ್ಲಿ, ಒಟ್ಟು 34,115 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯ 14...
ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿ ಸಭೆ
ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿ ಸಭೆ
Updated on

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿ ಸಭೆಯಲ್ಲಿ, ಒಟ್ಟು 34,115 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ.

ಹೆಚ್ಚುವರಿ 13,911 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್ಕಾನ್‌ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ. ಸೆಮಿಕಂಡಕ್ಟರ್ ಕ್ಷೇತ್ರದ ದೈತ್ಯ ಸಂಸ್ಥೆಯಾಗಿರುವ ಫಾಕ್ಸ್ಕಾನ್, ಈಗಾಗಲೇ ರಾಜ್ಯದಲ್ಲಿ ರೂ 8,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ.

ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್ (ರೂ 4,960 ಕೋಟಿ ), ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್(ರೂ 3,804 ಕೋಟಿ ), ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್ (ರೂ 3237.30 ಕೋಟಿ ), ಟಿಆರ್‌ಐಎಲ್ ಬೆಂಗಳೂರು ರಿಯಲ್ ಎಸ್ಟೇಟ್ ಸಿಕ್ಸ್ ಲಿಮಿಟೆಡ್ (ರೂ. 3273 ಕೋಟಿ ಹೂಡಿಕೆ), ಜಾನಕಿ ಕಾರ್ಪ್ ಲಿಮಿಟೆಡ್ (ರೂ. 607 ಕೋಟಿ ಮೊತ್ತದ ಹೆಚ್ಚುವರಿ ಹೂಡಿಕೆ) ಪ್ರಸ್ತಾವನೆಗಳು 'ಎಸ್‌ಎಚ್‌ಎಲ್‌ಸಿಸಿ’ ಅನುಮೋದನೆ ಪಡೆದಿರುವ ದೊಡ್ಡ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಲ್ಲಿ ಸೇರಿವೆ.

ಸಮಿತಿಯ ಮುಂದೆ ಮಂಡಿಸಲಾದ ಪ್ರಸ್ತಾವನೆಗಳ ಪರಿಶೀಲನೆಯ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಹೂಡಿಕೆದಾರರು ಉದ್ಯಮ ಸ್ಥಾಪನೆಗೆ ಸಲ್ಲಿಸಿದ ಅರ್ಜಿಗಳ ಕುರಿತು ಎಲ್ಲ ಇಲಾಖೆಗಳು ನಿಗದಿತ ಕಾಲಮಿತಿಯಲ್ಲಿ ತಮ್ಮ ಅಭಿಪ್ರಾಯ ನೀಡಬೇಕು. ಎಲ್ಲ ಷರತ್ತುಗಳನ್ನು ಪೂರೈಸುವ ಸಂದರ್ಭದಲ್ಲಿ ಏಕಗವಾಕ್ಷಿ ವ್ಯವಸ್ಥೆಯಲ್ಲಿ 30 ದಿನಗಳಲ್ಲಿ ಅನುಮೋದನೆ ನೀಡಬೇಕು. ನಂತರ ಉದ್ಯಮಿಗಳು ಪುನಃ ವಿವಿಧ ಇಲಾಖೆಗಳಿಗೆ ಅಲೆಯುವಂತಾಗಬಾರದು” ಎಂದು ಸೂಚನೆ ನೀಡಿದರು.

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರಸ್ತಾವನೆಗಳ ಪರಿಶೀಲನೆಯಲ್ಲಿ ವಿಳಂಬವಾಗುತ್ತಿರುವುದನ್ನು ಗಮನಿಸಿದ ಮುಖ್ಯಮಂತ್ರಿಗಳು, ನಿಗದಿತ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿದರು.

“ಪ್ರಸ್ತಾವನೆಗಳ ಕಡತವು ಇಲಾಖೆಗಳ ಅಭಿಪ್ರಾಯಕ್ಕಾಗಿ ಬಂದಾಗ, ಇಲಾಖಾ ಸಚಿವರ ಗಮನಕ್ಕೆ ಈ ವಿಷಯವನ್ನು ಕಡ್ಡಾಯವಾಗಿ ತರಬೇಕು” ಎಂದೂ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

“ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ ಒಟ್ಟು ರೂ 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ಇವುಗಳಿಂದ ಈ ಪ್ರದೇಶದಲ್ಲಿ 3538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂತಹ ಸಂಘಟಿತ ಪ್ರಯತ್ನಗಳು ’ಬೆಂಗಳೂರಿನ ಆಚೆ’ ಉಪಕ್ರಮದ ಭಾಗವಾಗಿವೆ” ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ , ಸಚಿವರಾದ ಚೆಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ, ನಾಗೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಅನುಮೋದನೆ ಪಡೆದಿರುವ ಹೊಸ ಯೋಜನೆಗಳು
ಕಂಪನಿ: ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್
ಹೂಡಿಕೆ: ರೂ 4960 ಕೋಟಿ
ಉದ್ಯೋಗ: 60

ಕಂಪನಿ : ಜಾನಕಿ ಕಾರ್ಪ್ ಲಿಮಿಟೆಡ್
ಹೂಡಿಕೆ: ರೂ 607 ಕೋಟಿ
ಉದ್ಯೋಗ: 618

ಕಂಪನಿ: ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್
ಹೂಡಿಕೆ: ರೂ 3804 ಕೋಟಿ
ಉದ್ಯೋಗ: 2800

ಕಂಪನಿ: ಟ್ರಿಲ್ ಬೆಂಗಳೂರು ರಿಯಲ್ ಎಸ್ಟೇಟ್ ಸಿಕ್ಸ್ ಲಿಮಿಟೆಡ್
ಹೂಡಿಕೆ: ರೂ 3273 ಕೋಟಿ
ಉದ್ಯೋಗ: 5500

ಕಂಪನಿ : ಎಂಬಸಿ ಪ್ರಾಪರ್ಟಿ ಡೆವಲಪ್‌ಮೆಂಟ್ಸ್ ಪ್ರೈವೇಟ್ ಲಿಮಿಟೆಡ್
ಹೂಡಿಕೆ: ರೂ 700 ಕೋಟಿ
ಉದ್ಯೋಗ: 600

ಕಂಪನಿ: ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್
ಹೂಡಿಕೆ: ರೂ 3237.30 ಕೋಟಿ
ಉದ್ಯೋಗ: 2037

ಕಂಪನಿ : ಟೊಯೊಟಾ ಕಿರ್ಲೋಸ್ಕರ್ ಆಟೊಪಾರ್ಟ್ಸ್ ಪ್ರೈವೇಟ್ ಲಿಮಿಟೆಡ್
ಹೂಡಿಕೆ: ರೂ 450 ಕೋಟಿ
ಉದ್ಯೋಗ: 243

ಕಂಪನಿ: ಕೇನ್ಸ್ ಸರ್ಕೀಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್
ಹೂಡಿಕೆ: ರೂ 950 ಕೋಟಿ
ಉದ್ಯೋಗ: 830

ಕಂಪನಿ: ಕೇನ್ಸ್ ಸೆಮಿಕಾನ್ ಪ್ರೈವೇಟ್ ಲಿಮಿಟೆಡ್
ಹೂಡಿಕೆ: ರೂ 1,381.10 ಕೋಟಿ
ಉದ್ಯೋಗ: 560

ಕಂಪನಿ: ಓರಿಯಂಟ್ ಸಿಮೆಂಟ್ ಲಿಮಿಟೆಡ್
ಹೂಡಿಕೆ: ರೂ 90 ಕೋಟಿ
ಉದ್ಯೋಗ: 60

ಹೆಚ್ಚುವರಿ ಬಂಡವಾಳ ಹೂಡಿಕೆ ಯೋಜನೆಗಳು
ಕಂಪನಿ: ಫಾಕ್ಸ್ಕಾನ್ ಹಾನ್ ಹೈ ಟೆಕ್ನಾಲಜಿ ಇಂಡಿಯಾ ಮೆಗಾ ಡೆವಲಪ್‌ಮೆಂಟ್ ಪ್ರೈವೇಟ್ ಲಿಮಿಟೆಡ್
ಹೂಡಿಕೆ: ರೂ 13911 ಕೋಟಿ

ಕಂಪನಿ: ಬಾಗ್ಮನೆ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್
ಹೂಡಿಕೆ: ರೂ 361.59 ಕೋಟಿ

ಕಂಪನಿ: ಪಟೇಲ್ ಎಂಜಿನಿಯರಿAಗ್ ಲಿಮಿಟೆಡ್
ಹೂಡಿಕೆ: 290 ಕೋಟಿ

ಕಂಪನಿ: ವಿಕಾಸ ಟೆಲಿಕಾಂ ಪ್ರೈವೇಟ್ ಲಿಮಿಟೆಡ್
ಹೂಡಿಕೆ: 100 ಕೋಟಿ

ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು

ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್
ಸ್ಥಳ: ದಾವಣಗೆರೆ, ವಿಜಯನಗರ, ಚಿತ್ರದುರ್ಗ
ಹೂಡಿಕೆ: ರೂ 4960 ಕೋಟಿ
ಉದ್ಯೋಗ: 60

ಕಂಪನಿ: ಜಾನಕಿ ಕಾರ್ಪ್ ಲಿಮಿಟೆಡ್
ಸ್ಥಳ: ಬಳ್ಳಾರಿ
ಹೂಡಿಕೆ: ರೂ 607 ಕೋಟಿ

ಕಂಪನಿ: ಓರಿಯಂಟ್ ಸಿಮೆಂಟ್ ಲಿಮಿಟೆಡ್
ಸ್ಥಳ: ಕಲಬುರಗಿ
ಹೂಡಿಕೆ: ರೂ 90 ಕೋಟಿ
ಉದ್ಯೋಗ: 60

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com