ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಶಾಸಕ ತುಕಾರಾಂ ನೇತೃತ್ವದ ನಿಯೋಗದೊಂದಿಗೆ ಸಿಎಂ ಸಿದ್ದರಾಮಯ್ಯ
ಶಾಸಕ ತುಕಾರಾಂ ನೇತೃತ್ವದ ನಿಯೋಗದೊಂದಿಗೆ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಡುತಿನಿ ಅರ್ಸೆಲರ್‌ ಮಿತ್ತಲ್‌ ಇಂಡಿಯಾ ಸೇರಿದಂತೆ ವಿವಿಧ ಕಾರ್ಖಾನೆಗಳ ಆರಂಭ ಮತ್ತು ರೈತರ ಸಮಸ್ಯೆಗಳ ಬಗ್ಗೆ ಶಾಸಕರಾದ ತುಕಾರಾಂ ನೇತೃತ್ವದ ನಿಯೋಗ ಭೇಟಿಯಾಗಿ, ಚರ್ಚಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ, ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡುವುದಿಲ್ಲ ಎಂದರು.

ಕಾರ್ಖಾನೆಗಳಿಗಾಗಿ ಭೂಸ್ವಾಧೀನ ಮಾಡಿಕೊಳ್ಳುವ ಸಂದರ್ಭದಲ್ಲಿ ದರ ನಿಗದಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಯು ಅನ್ಯಾಯವೆಸಗಿದ್ದರೆ ಅದನ್ನು ಕೂಡ ಪರಿಶೀಲಿಸಿ, ಸಮಸ್ಯೆ ಬಗೆಹರಿಸಲಾಗುವುದು. ಅರ್ಸೆಲರ್‌ ಮಿತ್ತಲ್‌ ಕಾರ್ಖಾನೆಗಾಗಿ ನಡೆಸಿರುವ ಭೂಸ್ವಾಧೀನ ಮತ್ತು ರೈತರಿಗೆ ನೀಡಿರುವ ಪರಿಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟಿನ ತೀರ್ಪಿನ ಬಗ್ಗೆ ಅಡ್ವೊಕೇಟ್‌ ಜನರಲ್‌ ಅವರ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. 

ಸಭೆಯಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ನಾಗೇಂದ್ರ, ಸಂಡೂರು ಶಾಸಕ ಇ.ತುಕಾರಾಂ, ಜಿಲ್ಲೆಯ ಶಾಸಕರುಗಳಾದ ಕಂಪ್ಲಿ ಗಣೇಶ್, ನಾ.ರಾ.ಭರತ್ ರೆಡ್ಡಿ, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಭೂಮಿ ಕಳೆದುಕೊಂಡ ರೈತ ಪ್ರತಿನಿಧಿಗಳು ಭಾಗವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com