ಬೆಂಗಳೂರು: ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾದ ಕೂಡಲೇ ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.
17 ವರ್ಷದ ಬಾಲಕಿಯ 24 ವಾರಗಳ ಗರ್ಭಪಾತ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠವು ಈ ನಿರ್ದೇಶನ ನೀಡಿದೆ.
ಅತ್ಯಾಚಾರದಿಂದ ಗರ್ಭ ಧರಿಸಿದರೆ ಅವರಿಗೆ ಇರುವ ಹಕ್ಕುಗಳ ಕುರಿತು ಸಂತ್ರಸ್ತರಿಗೆ ತಿಳಿಸಬೇಕು. ಇದರಿಂದ ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರು ತುಂಬಾ ತಡವಾದ ಮೇಲೆ ಗರ್ಭಪಾತಕ್ಕೆ ಅನುಮತಿ ಕೋರಿ ನ್ಯಾಯಾಲಯದ ಕದತಟ್ಟುವುದು ತಪ್ಪಲಿದೆ ಎಂದು ನ್ಯಾಯಾಲಯ ಹೇಳಿದೆ.
ಹಾಲಿ ಪ್ರಕರಣದಲ್ಲಿ ಅತ್ಯಾಚಾರ ಸಂತ್ರಸ್ತೆಗೆ ಮುಂಚಿತವಾಗಿ ಗರ್ಭಪಾತ ಹಕ್ಕುಗಳ ಕುರಿತು ಮೊದಲೇ ತಿಳಿಸಿದ್ದರೆ ಆಕೆಯ ತಂದೆ ಹೈಕೋರ್ಟ್ ಮೆಟ್ಟಿಲೇರುತ್ತಿರಲಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ತಡವಾಗಿ ಗರ್ಭಪಾತಕ್ಕೆ ಅನುಮತಿ ಕೋರುವಾಗ ಸಂತ್ರಸ್ತೆ ಮತ್ತು ಆಕೆಯ ಕುಟುಂಬಸ್ಥರು ಮಾನಸಿಕ ಯಾತನೆ ಅನುಭವಿಸಬೇಕಾಗುತ್ತದೆ (ವೈದ್ಯಕೀಯ ಗರ್ಭಪಾತ ಕಾಯಿದೆ 24 ವಾರಗಳ ಬಳಿಕ). “ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರಿಗೆ ಎಫ್ಐಆರ್ ದಾಖಲಿಸುವ ಸಂದರ್ಭದಲ್ಲೇ ವೈದ್ಯಕೀಯ ಗರ್ಭಪಾತದ ಸಾಧ್ಯಾಸಾಧ್ಯತೆಗಳ ಕುರಿತು ತಿಳಿಸಿದರೆ ಸಂತ್ರಸ್ತೆ ಮತ್ತು ಆಕೆಯ ಕುಟುಂಬಸ್ಥರಿಗೆ ಆಗುವ ಮಾನಸಿಕ ಯಾತನೆಯನ್ನು ತಪ್ಪಿಸಬಹುದು” ಎಂದು ತಿಳಿಸಿದೆ.
ಇದೇ ವೇಳೆ ಅತ್ಯಾಚಾರದಿಂದ ಗರ್ಭ ಧರಿಸಿದರೆ ಪಾಲಿಸಬೇಕಾದ ನಿರ್ದೇಶನಗಳನ್ನು ನ್ಯಾಯಾಲಯ ನೀಡಿದ್ದು, ಅವುಗಳು ಇಂತಿವೆ:
Advertisement
Advertisement