ರಾಜಕಾಲುವೆ ಒತ್ತುವರಿಗಳ ತೆರವುಗೊಳಿಸಲಾಗಿದೆ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

ಹೈಕೋರ್ಟ್ ನಿರ್ದೇಶನದ ಮೇರೆಗೆ ಪಾಲಿಕೆಯು ನಗರದಲ್ಲಿನ ರಾಜಕಾಲುವೆ (ಎಸ್‌ಡಬ್ಲ್ಯುಡಿ) ಒತ್ತುವರಿಯನ್ನು ತೆರವುಗೊಳಿಸಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶುಕ್ರವಾರ ಹೇಳಿದರು.
ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
Updated on

ಬೆಂಗಳೂರು: ಹೈಕೋರ್ಟ್ ನಿರ್ದೇಶನದ ಮೇರೆಗೆ ಪಾಲಿಕೆಯು ನಗರದಲ್ಲಿನ ರಾಜಕಾಲುವೆ (ಎಸ್‌ಡಬ್ಲ್ಯುಡಿ) ಒತ್ತುವರಿಯನ್ನು ತೆರವುಗೊಳಿಸಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶುಕ್ರವಾರ ಹೇಳಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯ ಬಗ್ಗೆ ಅಧಿಕಾರಿಗಳ ಸಭೆಯನ್ನು ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ನಗರದಲ್ಲಿ ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಸರ್ವೇ ಮಾಡಲು ಹೆಚ್ಚು ಭೂಮಾಪಕರ ಅವಶ್ಯಕತೆಯಿದ್ದು, ಕಂದಾಯ ಇಲಾಖೆಯ ಅಡಿ ಬರುವ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಗೆ ಪತ್ರ ಬರೆದು ಹೆಚ್ಚು ಭೂಮಾಪಕರನ್ನು ನಿಯೋಜನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಕ್ಕೆ ಕೆಳ ಹಂತದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹದೇವಪುರ ವ್ಯಾಪ್ತಿಯ ಎಬಿಕೆ, ಗುಂಜೂರು, ಕರಿಯಮ್ಮನ ಅಗ್ರಹಾರ, ಬೆಳ್ಳತ್ತೂರಿನಲ್ಲಿ ಹಾಗೂ ಕೆ.ಆರ್ ಪುರದ ಸರ್ವೆ ಸಂಖ್ಯೆ 69ರಲ್ಲಿ 3 ಅಂತಸ್ತಿನ ಕಟ್ಟಡದಲ್ಲಿ 10 ಮಳಿಗೆಗಳು ಸೇರಿದಂತೆ 62 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಯಲಹಂಕ ವಲಯ ವ್ಯಾಪ್ತಿಯಲ್ಲಿ 8 ಒತ್ತುವರಿಗಳು ಹಾಗೂ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ 5 ಒತ್ತುವರಿಗಳು ಸೇರಿದಂತೆ ಒತ್ತು 75 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ.

ಹೊಸ ಒತ್ತುವರಿಗಳು ಸೇರಿದಂತೆ 3,176 ಒತ್ತುವರಿಗಳನ್ನು ಗುರುತಿಸಲಾಗಿದ್ದು, 2,322 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಇನ್ನು 854 ಒತ್ತುವರಿಗಳಲ್ಲಿ 155 ಒತ್ತುವರಿ ಪ್ರಕರಣಗಳು ನ್ಯಾಯಾಲಯದಲ್ಲಿರುತ್ತದೆ. 487 ಒತ್ತುವರಿಗಳಿಗೆ ಆದೇಶಗಳನ್ನು ಜಾರಿಗೊಳಿಸುವ ಹಂತದಲ್ಲಿದೆ. ಇನ್ನು 162 ಒತ್ತುವರಿ ತೆರವಿಗೆ ತಹಶೀಲ್ದಾರ್‌ರಿಂದ ಆದೇಶಗಳನ್ನು ಜಾರಿಗೊಳಿಸಲಾಗಿದ್ದು, ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಬೇಕಿದೆ ಎಂದು ರಾಜಕಾಲುವೆ ವಿಭಾಗದ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ 202 ಕೆರೆಗಳಿದ್ದು, 159 ಕೆರೆಗಳಲ್ಲಿ ಒತ್ತುವರಿಯಾಗಿದೆ ಎಂಬುದನ್ನು ಗುರುತಿಸಲಾಗಿದೆ. ಅದರಂತೆ 140 ಕೆರೆಗಳಲ್ಲಿ ಒತ್ತುವರಿಯಾಗಿರುವ ಬಗ್ಗೆ ತಹಶೀಲ್ದಾರರಿಗೆ ಪತ್ರಗಳನ್ನು ಬರೆಯಲಾಗಿದೆ. ಈ ಪೈಕಿ 40 ಕೆರೆಗಳ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, 100 ಕೆರೆಗಳಲ್ಲಿ ಸರ್ವೇ ಕಾರ್ಯ ನಡೆಸಬೇಕಿದೆ. ಉಳಿದ ಕೆರೆಗಳಲ್ಲಿ ಸರ್ವೇಕಾರ್ಯವನ್ನು ತ್ವರಿತವಾಗಿ ನಡೆಸುವಂತೆ ಸೂಚನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com