ಶೌಚಗುಂಡಿಗೆ ಮಕ್ಕಳನ್ನು ಇಳಿಸಿದ ಪ್ರಕರಣ: ಅಧ್ಯಯನಕ್ಕೆ ಬಿಜೆಪಿ ಸಮಿತಿ ರಚನೆ

ಕೋಲಾರ ಜಿಲ್ಲೆಯ ಮಾಲೂರು ಸಮೀಪದ ಯಲುವಹಳ್ಳಿ  ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಸ್ವಚ್ಛಗೊಳಿಸಿರುವ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಖಂಡಿಸಿದ್ದು, ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.
ಶಾಲಾ ಮಕ್ಕಳಿಂದ ಶೌಚ ಗುಂಡಿ ಸ್ವಚ್ಛತೆ ಕಾರ್ಯ
ಶಾಲಾ ಮಕ್ಕಳಿಂದ ಶೌಚ ಗುಂಡಿ ಸ್ವಚ್ಛತೆ ಕಾರ್ಯ

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ಸಮೀಪದ ಯಲುವಹಳ್ಳಿ  ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಸ್ವಚ್ಛಗೊಳಿಸಿರುವ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಖಂಡಿಸಿದ್ದು, ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.

ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಭಾರತಿ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ, ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಪ್ರಮೀಳಾ ನಾಯ್ಡು ಅವರು ಈ ಸಮಿತಿಯಲ್ಲಿದ್ದಾರೆ.

ಮಲದ ಗುಂಡಿ ಸ್ವಚ್ಛತೆ, ಮಕ್ಕಳಿಗೆ ಶಿಕ್ಷೆ ಕೊಡುವುದು ಸೇರಿದಂತೆ ಅಲ್ಲಿನ ಸಮಸ್ಯೆಗಳನ್ನೂ ಈ ಸಮಿತಿ ಪರಿಶೀಲಿಸಲಿದೆ. ಸ್ಥಳಕ್ಕೆ ಭೇಟಿ ನೀಡಿ, ವಾಸ್ತವಾಂಶಗಳನ್ನು ಪರಿಶೀಲಿಸಿ ರಾಜ್ಯಾಧ್ಯಕ್ಷರಿಗೆ ಸಮಿತಿ ವರದಿ ನೀಡಲಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com