ನಿಗಮ-ಮಂಡಳಿ ಅಧ್ಯಕ್ಷರ ನೇಮಕ: ಸಿಎಂ-ಡಿಸಿಎಂ ದೆಹಲಿಗೆ ಪ್ರಯಾಣ, ಶೀಘ್ರದಲ್ಲೇ ಪ್ರಕಟ ಸಾಧ್ಯತೆ

ನಿಗಮ-ಮಂಡಳಿ ಅಧ್ಯಕ್ಷರ ನೇಮಕಕ್ಕೆ ರಾಜ್ಯದಿಂದ ಅಖೈರುಗೊಳಿಸಿ ಕಳುಹಿಸಿರುವ ಪಟ್ಟಿಗೆ ಅಂಕಿತ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಹಾಗೂ ಸಚಿವರ ತಂಡ ಸೋಮವಾರ ದೆಹಲಿಗೆ ಭೇಟಿ ನೀಡುತ್ತಿದ್ದು, ಹೈಕಮಾಂಡ್ ಜೊತೆಗಿನ ಅಂತಿಮ ಹಂತದ ಚರ್ಚೆ ಬಳಿಕ ಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಿಗಮ-ಮಂಡಳಿ ಅಧ್ಯಕ್ಷರ ನೇಮಕಕ್ಕೆ ರಾಜ್ಯದಿಂದ ಅಖೈರುಗೊಳಿಸಿ ಕಳುಹಿಸಿರುವ ಪಟ್ಟಿಗೆ ಅಂಕಿತ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಹಾಗೂ ಸಚಿವರ ತಂಡ ಸೋಮವಾರ ದೆಹಲಿಗೆ ಭೇಟಿ ನೀಡುತ್ತಿದ್ದು, ಹೈಕಮಾಂಡ್ ಜೊತೆಗಿನ ಅಂತಿಮ ಹಂತದ ಚರ್ಚೆ ಬಳಿಕ ಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ನಿಗಮ-ಮಂಡಳಿ ಅಧ್ಯಕ್ಷರ ನೇಮಕ ಪಟ್ಟಿಯನ್ನು ಅಂತಿಮ ಗೊಳಿಸುವ ಸಂಬಂಧ ನಿನ್ನೆಯಷ್ಟೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಭೇಟಿ ನೀಡಿ, ಮಾತುಕತೆ ನಡೆಸಿದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ, ಮಂಡಳಿ ನೇಮಕ ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ರವಾನಿಸಿದ್ದು, ಅದಕ್ಕೆ ಅಂಕಿತ ಪಡೆಯಬೇಕಾಗಿದೆ. ಹೀಗಾಗಿ ರಾಜ್ಯದ ನಾಯಕರು ದೆಹಲಿಗೆ ತೆರಳುತ್ತಿದ್ದೇವೆ. ಹೈಕಮಾಂಡ್ ನಮ್ಮನ್ನು ಕರೆದಿಲ್ಲ. ನಾವೇ ಅಲ್ಲಿಗೆ ಹೋಗುತ್ತಿದ್ದೇವೆಂದು ಹೇಳಿದರು.

ನಾರಾಯಣ ಗೌಡ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿ, "ನಾರಾಯಣ ಗೌಡರು ಕನ್ನಡದಲ್ಲಿ ನಾಮಫಲಕ ಹಾಕಲು ಹೋರಾಟ ಮಾಡುತ್ತಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರು ಹೋರಾಟಗಾರರು, ಹೋರಾಟ ಮಾಡುವುದು ಸಹಜ. ಕರ್ನಾಟಕದಲ್ಲಿ ಕನ್ನಡದಲ್ಲಿ ನಾಮಫಲಕ ಹಾಕುವಂತೆ ಆದೇಶವಿದೆ. ಯಾರೋ ಅವರ ವಿರುದ್ಧ ದೂರು ನೀಡಿದ್ದಾರೆ. ಈ ಬಗ್ಗೆ ನಾನು ಪೊಲೀಸ್ ಆಯುಕ್ತರ ಜೊತೆ ಮಾತನಾಡಿದ್ದೇನೆ. ಹೋರಾಟಗಾರರಿಗೆ ನಾವು ಎಷ್ಟು ಗೌರವ ನೀಡಬೇಕೋ ಅದನ್ನು ನೀಡಲೇಬೇಕು. ಅವರುಗಳ ಹೋರಾಟದಿಂದ ಕನ್ನಡ ಉಳಿಯುತ್ತಿದೆ. ಅವರಿಗೆ ರಾಜಕೀಯ ಬೇಡ. ಅವರ ವಿರುದ್ಧ ಸುಳ್ಳು ಕೇಸು ದಾಖಲಿಸಬಾರದು ಎಂದು ಆಯುಕ್ತರಿಗೆ ಹೇಳಿದ್ದೇನೆ" ಎಂದು ಹೇಳಿದರು.

ಇನ್ನು ದೆಹಲಿ ಭೇಟಿ ವೇಳೆ ಡಿಕೆ.ಶಿವಕುಮಾರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಂಪುಟದ ಕೆಲವು ಸಚಿವರನ್ನು ಭೇಟಿ ಮಾಡಿ, ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com