ರಾಜ್ಯದಲ್ಲಿ ಇಂದು 104 ಜನರಿಗೆ ಕೊರೋನಾ ಪಾಸಿಟಿವ್; ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆ

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ 104 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ 104 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 104 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 40,89,356ಕ್ಕೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು 8 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ಪ್ರಮಾಣ ಶೇಕಡಾ 5.93ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿಯೇ ಬರೊಬ್ಬರಿ 85 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇದರೊಂದಿಗೆ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 234ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com