ಹಿಜಾಬ್ ಮೇಲಿನ ನಿಷೇಧ ತೆರವು: 'ಇತರರು ಕೇಸರಿ, ನೀಲಿ, ಹಳದಿ ಶಾಲು ಬಳಸಲು ಕೇಳಬಹುದು' ಎಂದ ಸಿಟಿ ರವಿ

ಕಾಂಗ್ರೆಸ್ ಸರ್ಕಾರವು ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವುದಾಗಿ ಹೇಳಿರುವುದು ಶಾಲಾ-ಕಾಲೇಜುಗಳಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆಗಳನ್ನು ಸೂಚಿಸುತ್ತದೆ. ಹಿಜಾಬ್ ಧರಿಸಲು ಅವಕಾಶ ನೀಡಿದರೆ, ಇತರರು ಕೂಡ ಕೇಸರಿ ಮತ್ತು ಇತರ ಬಣ್ಣದ ಶಾಲುಗಳನ್ನು ಧರಿಸಲು ಬಯಸುತ್ತಾರೆ ಎಂದು ಬಿಜೆಪಿ ನಾಯಕ ಸಿಟಿ ರವಿ ಶನಿವಾರ ಹೇಳಿದ್ದಾರೆ.
ಸಿಟಿ ರವಿ
ಸಿಟಿ ರವಿ
Updated on

ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರವು ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವುದಾಗಿ ಹೇಳಿರುವುದು ಶಾಲಾ-ಕಾಲೇಜುಗಳಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆಗಳನ್ನು ಸೂಚಿಸುತ್ತದೆ. ಹಿಜಾಬ್ ಧರಿಸಲು ಅವಕಾಶ ನೀಡಿದರೆ, ಇತರರು ಕೂಡ ಕೇಸರಿ ಮತ್ತು ಇತರ ಬಣ್ಣದ ಶಾಲುಗಳನ್ನು ಧರಿಸಲು ಬಯಸುತ್ತಾರೆ ಎಂದು ಬಿಜೆಪಿ ನಾಯಕ ಸಿಟಿ ರವಿ ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ, ಇತರರು ಕೇಸರಿ, ನೀಲಿ ಅಥವಾ ಹಳದಿ ಶಾಲು ಧರಿಸಲು ಅನುಮತಿ ನೀಡುವಂತೆ ಒತ್ತಾಯಿಸುತ್ತಾರೆ ಎಂದಿದ್ದಾರೆ.

'ಮುಖ್ಯಮಂತ್ರಿಗಳು ವಿದ್ಯಾರ್ಥಿಗಳನ್ನು ಗುರುತಿಸಲು ಸಮವಸ್ತ್ರವನ್ನು ಬಳಸುವ ಬಗ್ಗೆ ಯೋಚಿಸುತ್ತಿರುವಂತಿದೆ. ಅವರು ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಕಡ್ಡಾಯಗೊಳಿಸುವ ಹಿಂದಿನ ಮೂಲ ಉದ್ದೇಶವನ್ನು ಹಾಳು ಮಾಡುತ್ತಿದ್ದಾರೆ' ಎಂದು ಕಿಡಿಕಾರಿದರು.

ವರ್ಗ ಮತ್ತು ಧರ್ಮದ ವ್ಯತ್ಯಾಸಗಳನ್ನು ಅಳಿಸಿಹಾಕಲು ಮತ್ತು ವಿದ್ಯಾರ್ಥಿಗಳಲ್ಲಿ ಸಮಾನತೆಯನ್ನು ಖಚಿತಪಡಿಸಿಕೊಳ್ಳಲು 1964 ರಲ್ಲಿ ಸಮವಸ್ತ್ರ ಕಾಯ್ದೆಯನ್ನು ಜಾರಿಗೆ ತರಲಾಯಿತು ಎಂದು ಅವರು ಹೇಳಿದರು.

ಉಡುಪು ಪ್ರತಿಯೊಬ್ಬರ ವೈಯಕ್ತಿಕ ಆಯ್ಕೆಯ ವಿಷಯವಾಗಿದ್ದು, ರಾಜ್ಯದಲ್ಲಿ ಹಿಜಾಬ್ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದರು. 

'ಪ್ರಧಾನಿ ಮೋದಿಯವರ 'ಸಬ್ ಕಾ ಸಾಥ್ ಸಬ್ ಕಾ ವಿಕಾಸ್' ಎನ್ನುವುದು ಬೋಗಸ್ ಆಗಿದೆ. ಬಿಜೆಪಿಯು ಜನರು ಮತ್ತು ಸಮಾಜವನ್ನು ಬಟ್ಟೆ, ಉಡುಗೆ ಮತ್ತು ಜಾತಿಯ ಆಧಾರದ ಮೇಲೆ ವಿಭಜಿಸುತ್ತಿದೆ' ಎಂದು ಸಿಎಂ ದೂರಿದರು.

ಹಿಂದಿನ ಸರ್ಕಾರ ಹೇರಿದ್ದ ಹಿಜಾಬ್ ನಿಷೇಧವನ್ನು ಹಿಂಪಡೆಯುವ ನಿರ್ಧಾರವನ್ನು ಪ್ರಕಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕರ್ನಾಟಕ ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com