ಹಿಜಾಬ್ ನಿಷೇಧ ತೆರವು: ಮೊದಲು ನಿಮ್ಮ ಮನೆಯನ್ನು ಸರಿಮಾಡಿಕೊಳ್ಳಿ; ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

ಹಿಂದಿನ ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತದಲ್ಲಿ 2022 ರಲ್ಲಿ ಹೇರಲಾಗಿದ್ದ ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಲು ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವ ಬೆನ್ನಲ್ಲೇ, ಐಟಿ ಮತ್ತು ಬಿಟಿ ಮತ್ತು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ

ಬೆಂಗಳೂರು: ಹಿಂದಿನ ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತದಲ್ಲಿ 2022 ರಲ್ಲಿ ಹೇರಲಾಗಿದ್ದ ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಲು ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವ ಬೆನ್ನಲ್ಲೇ, ಐಟಿ ಮತ್ತು ಬಿಟಿ ಮತ್ತು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಆಡಳಿತ ಪಕ್ಷವು ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಮತ್ತು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ ಎಂಬ ವಿರೋಧ ಪಕ್ಷ ಬಿಜೆಪಿ ಆರೋಪಕ್ಕೆ ಸಚಿವರು ಪ್ರತಿಕ್ರಿಯಿಸಿದರು.

'ಈ ನಿರ್ಧಾರವು ಕಾನೂನಿನ ಪ್ರಕಾರವಾಗಿದೆ ಮತ್ತು ಕೇಸರಿ ಪಕ್ಷವು ಮೊದಲು 'ತಮ್ಮ ಸ್ವಂತ ಮನೆಯನ್ನು ಸರಿ ಮಾಡಿಕೊಳ್ಳಲಿ' ಎಂದರು. 

'ಕರ್ನಾಟಕ ಸರ್ಕಾರ ಏನು ಮಾಡಿದರೂ ಅದು ಸಂವಿಧಾನದ ಕಾನೂನು ಮತ್ತು ಚೌಕಟ್ಟಿನ ಪ್ರಕಾರವಾಗಿರುತ್ತದೆ. ಬಿಜೆಪಿಗೆ ಮಾಡಲು ಯಾವುದೇ ಕೆಲಸವಿಲ್ಲ, ಆದ್ದರಿಂದ ಅವರು ಎಲ್ಲದರಲ್ಲೂ ಕೊಂಕು ಹುಡುಕುತ್ತಾರೆ. ಅವರು ಮೊದಲು ತಮ್ಮ ಮನೆಯೊಳಗಿನ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲಿ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಬಿಜೆಪಿ ಹಿಜಾಬ್ ಮೇಲೆ ಹೇರಿರುವ ನಿಷೇಧವನ್ನು ಹಿಂಪಡೆಯುವುದನ್ನು ತೀವ್ರವಾಗಿ ವಿರೋಧಿಸುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು 'ಯುವ ಮನಸ್ಸುಗಳನ್ನು ಧಾರ್ಮಿಕ ಆಧಾರದ ಮೇಲೆ ವಿಭಜಿಸುತ್ತಿದೆ' ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.

ಕಳೆದ ವರ್ಷ ಜನವರಿಯಲ್ಲಿ ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿದ್ದ ಆರು ವಿದ್ಯಾರ್ಥಿನಿಯರಿಗೆ ತರಗತಿಗೆ ಪ್ರವೇಶ ನಿರಾಕರಿಸಿದಾಗ ಹಿಜಾಬ್ ವಿವಾದ ಮೊದಲ ಬಾರಿಗೆ ಪ್ರಾರಂಭವಾಯಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com