ಹಿಜಾಬ್ ವಿಚಾರದಲ್ಲಿ ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ: ಸಚಿವ ಮಧು ಬಂಗಾರಪ್ಪ

ಶಾಲಾ-ಕಾಲೇಜುಗಳಲ್ಲಿ ಈ ಹಿಂದೆ ಹೇರಲಾಗಿದ್ದ ಹಿಜಾಬ್ ನಿಷೇಧ ಕ್ರಮವನ್ನು ಹಿಂತೆಗೆದುಕೊಳ್ಳುವ ಕುರಿತು ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.
ಸಚಿವ ಮಧು ಬಂಗಾರಪ್ಪ
ಸಚಿವ ಮಧು ಬಂಗಾರಪ್ಪ
Updated on

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಈ ಹಿಂದೆ ಹೇರಲಾಗಿದ್ದ ಹಿಜಾಬ್ ನಿಷೇಧ ಕ್ರಮವನ್ನು ಹಿಂತೆಗೆದುಕೊಳ್ಳುವ ಕುರಿತು ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.

ಶಾಲಾ-ಕಾಲೇಜುಗಳಲ್ಲಿ ಈ ಹಿಂದೆ ಹೇರಲಾಗಿದ್ದ ಹಿಜಾಬ್ ನಿಷೇಧ ಕ್ರಮವನ್ನು ಹಿಂತೆಗೆದುಕೊಳ್ಳುವ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವಂತೆಯೇ ಈ ಬಗ್ಗೆ ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. 

ಮಾಧ್ಯಮಗಳೊಂದಿಗೆ ಮಾತನಾಡಿದ ಮಧು ಬಂಗಾರಪ್ಪ ಅವರು, 'ಹಿಜಾಬ್ (Hijab) ವಿಚಾರದಲ್ಲಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ಕಾನೂನಿನ ಅಡಿಯಲ್ಲೇ ಕ್ರಮ ತಗೆದುಕೊಳ್ಳುತ್ತೇವೆ. ಹಿಜಾಬ್ ವಿಚಾರದಲ್ಲಿ ಮುಖ್ಯಮಂತ್ರಿಗಳು ಹೇಳಿಕೆ ನೀಡಿದ್ದು, ಕಾನೂನು ಏನು ಹೇಳುತ್ತದೆ ಎಂಬುದನ್ನು ನೋಡಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಶಾಲಾ ಕಾಲೇಜುಗಳಲ್ಲಿ ಈ ಹೇಳಿಕೆಯಿಂದ ಗೊಂದಲ ಆಗಿದ್ದರೆ, ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ಪಡೆದು ಚರ್ಚೆ ಮಾಡಿ ನಿರ್ದೇಶನ ನೀಡುತ್ತೇನೆ ಎಂದು ಹೇಳಿದರು.

ಇದು ಸೂಕ್ಷ್ಮವಾದ ವಿಚಾರವಾಗಿದ್ದು, ಎಲ್ಲಾ ಸಾಧಕ-ಬಾಧಕಗಳ ಬಗ್ಗೆ ಕಾನೂನು ತಜ್ಞರ ಜೊತೆ ಮಾತುಕತೆ ನಡೆಸುತ್ತೇವೆ. ನಾವು ಏನೇ ತೀರ್ಮಾನ ಮಾಡಿದರೂ ಅದು ಕಾನೂನು ತಜ್ಞರ ಸಲಹೆ ಪಡೆದು ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಸಿಎಂ ಜೊತೆ ಮಾತನಾಡಿ ಮುಂದಿನ ತೀರ್ಮಾನ ಮಾಡಲಾಗುತ್ತದೆ. ಬಿಜೆಪಿ (BJP) ನಾಯಕರು ಇಂತಹ ವಿಚಾರದಲ್ಲಿ ರಾಜಕೀಯ ಮಾಡಲು ಹೋಗಿ ಜನ ಅವರನ್ನು ತಿರಸ್ಕರಿಸಿದ್ದಾರೆ. ಈಗಾಲಾದರು ಇಂತಹ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಅವರು ಬಿಡಬೇಕು ಎಂದು ಹೇಳಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com