ಅಪಾರ್ಟ್ಮೆಂಟ್‌ ಟೆರೇಸ್ ನಿಂದ ಜಿಗಿದು ಜಿಮ್‌ ತರಬೇತುದಾರ ಸಾವು: ಆತ್ಮಹತ್ಯೆ ಶಂಕೆ

ಅಪಾರ್ಟ್‌ಮೆಂಟ್ ವೊಂದರ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಜಿಮ್ ತರಬೇತುದಾರನೊಬ್ಬ ಸಾವನ್ನಪ್ಪಿರುವ ಘಟನೆಯೊಂದು ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಅಪಾರ್ಟ್‌ಮೆಂಟ್ ವೊಂದರ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಜಿಮ್ ತರಬೇತುದಾರನೊಬ್ಬ ಸಾವನ್ನಪ್ಪಿರುವ ಘಟನೆಯೊಂದು ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

ಹರಳೂರು-ಸರ್ಜಾಪುರ ಮುಖ್ಯರಸ್ತೆಯ ಅಪಾರ್ಟ್ ಮೆಂಟ್ ನಿವಾಸಿ ಗಣೇಶ್ ಪಾಂಡ (32) ಮೃತ ವ್ಯಕ್ತಿಯಾಗಿದ್ದಾರೆ. ಒಡಿಶಾದ ಮೂಲಕ ಗಣೇಶ್ ಮೂರು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು.

ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ವಾಸವಿದ್ದ ಅಕ್ಕನ ಮನೆಯಲ್ಲಿ ವಾಸವಿದ್ದರು. ಜಿಮ್‌ ತರಬೇತುದಾರರಾಗಿ ಕೆಲಸ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದ್ದಾರೆ.

‘ಭಾನುವಾರ ರಾತ್ರಿ ಟೆರೇಸ್ ಮೇಲೆ ಹೋಗಿದ್ದ ಗಣೇಶ್, ಅಲ್ಲಿಯೇ ಮದ್ಯ ಕುಡಿದಿದ್ದನೆಂದು ತಿಳಿದುಬಂದಿದೆ. ನಂತರ, ನಾಲ್ಕನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾನೆ. ಈ ವಳೆ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆಂದು ತಿಳಿಸಿದ್ದಾರೆ.

ಇದೊಂದು ಆತ್ಮಹತ್ಯೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com