15 ದಿನಗಳಲ್ಲಿ ಕನ್ನಡ ನಾಮಫಲಕಗಳ ಹಾಕಿ: ವಾಣಿಜ್ಯ ಮಳಿಗೆಗಳಿಗೆ ಬಿಬಿಎಂಪಿ ಸೂಚನೆ

ನಗರದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿನ ವಾಣಿಜ್ಯ ಮಳಿಗೆಗಳ ಸಮೀಕ್ಶೆ ನಡೆಸಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಸದ ಅಂಗಡಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿನ ವಾಣಿಜ್ಯ ಮಳಿಗೆಗಳ ಸಮೀಕ್ಶೆ ನಡೆಸಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಸದ ಅಂಗಡಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದ್ದಾರೆ.

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವ ಕುರಿತು ಮಂಗಳವಾರ ಸಭೆ ನಡೆಸಿದರು.

ನಗರದ ಎಲ್ಲಾ ಅಂಗಡಿ ಮುಂಗಟ್ಟುಗಳು, ಹೋಟೆಲ್ ಗಳು, ಮಾಲ್ ಸೇರಿದಂತೆ ಇನ್ನಿತರೆ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಅನುಷ್ಠಾನಗೊಳ್ಳಬೇಕು. ಕನ್ನಡ ಭಾಷೆಯ ನಾಮಫಲಕಗಳನ್ನು ಬಳದಿರುವ ಮಳಿಗೆಯ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ. ನಂತರ ಕನ್ನಡ ಭಾಷೆಯುಳ್ಳ ನಾಮಫಲಕಗಳನ್ನು ಅನುಷ್ಠಾನಗೊಳಿಸಲು ಗಡುವು ನೀಡಿ. ಒಂದು ವೇಳೆ ನಾಮಫಲಕ ಬದಲಾಯಿಸದಿದ್ದಲ್ಲಿ ವಾಣಿಜ್ಯ ಪರವಾನಗಿಯನ್ನು ಅಮಾನತುಗೊಳಿಸಬೇಕು. ನಂತರ ಪರವಾನಗಿಯನ್ನು ರದ್ದುಗೊಳಿಸಬೇಕೆಂದು ನಿರ್ದೇಶಿಸಿದರು.

ಇನ್ನು ನಗರದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿನ ವಾಣಿಜ್ಯ ಮಳಿಗೆಗಳ ಸಮೀಕ್ಷೆ ನಡೆಸಿ, 15 ದಿನಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ಮಾಲ್ ಗಳ ಮಾಲೀಕರೊಂದಿಗೆ ಸಭೆ ನಡೆಸಿ ಮಾಲ್ ಗಳಲ್ಲಿರುವ ಎಲ್ಲಾ ಮಳಿಗೆಗಘಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಇರುವ ನಾಮಫಲಕಗಳನ್ನು ಅಳವಡಿಸಲು ಸೂಚಿಸಿ ಜರುಗಿಸಲಾಗುವುದೆಂದು ಮಾಲ್ ಗಳಿಗೆ ಎಚ್ಚರಿಕೆ ನೀಡಬೇಕೆಂದು ತಿಳಿಸಿದರು.

ನಗರದ ಎಲ್ಲಾ ವಾಣಿಜ್ಯ ಮಳಿಗೆಗಳಲ್ಲಿ ಫೆ.28ರೊಳಗೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು. ಈ ಸಂಬಂಧ ಎಲ್ಲಾ ವಲಯಗಳಲ್ಲೂ ನಿಯಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com