ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಇಲ್ಲದಿದ್ದರೆ ಪರವಾನಗಿ ರದ್ದು: ಸಚಿವ ಶಿವರಾಜ್ ತಂಗಡಗಿ

ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಭಾಷೆಯನ್ನೇ ಬಳಸಬೇಕು ಎಂಬ ನಿಯಮವನ್ನು ಎಲ್ಲಾ ವಾಣಿಜ್ಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಕಠಿಣ ನಿಯಮಗಳು ಮತ್ತು ನಿಬಂಧನೆಗಳನ್ನು ಹೊರತರಲು ಯೋಜಿಸುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಬುಧವಾರ ಹೇಳಿದರು.
ಶಿವರಾಜ್ ತಂಗಡಗಿ
ಶಿವರಾಜ್ ತಂಗಡಗಿ
Updated on

ಬೆಂಗಳೂರು: ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಭಾಷೆಯನ್ನೇ ಬಳಸಬೇಕು ಎಂಬ ನಿಯಮವನ್ನು ಎಲ್ಲಾ ವಾಣಿಜ್ಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಕಠಿಣ ನಿಯಮಗಳು ಮತ್ತು ನಿಬಂಧನೆಗಳನ್ನು ಹೊರತರಲು ಯೋಜಿಸುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಬುಧವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಲ್ಲಾ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಇರದಿದ್ದರೆ ವಾಣಿಜ್ಯ ಸಂಸ್ಥೆಗಳ ಟ್ರೇಡ್ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ತಿಳಿಸಿದರು.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸರ್ಕಾರವು ಗೃಹ, ಶಿಕ್ಷಣ ಮತ್ತು ಸಂಬಂಧಿಸಿದ ಇತರ ಇಲಾಖೆಗಳ ನೋಡಲ್ ಏಜೆನ್ಸಿಯನ್ನು ರಚಿಸಲಿದೆ ಎಂದು ಅವರು ಹೇಳಿದರು.

ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿರುವ ಸಂಘಟನೆಯ ಕಾರ್ಯಕರ್ತರಿಗೆ ಬೆಂಬಲ ವ್ಯಕ್ತಪಡಿಸಿದ ಸಚಿವರು, ಪ್ರತಿಭಟನೆಗಳು ಶಾಂತಿಯುತವಾಗಿ ನಡೆಯಬೇಕು ಎಂದರು.

'ಇಲ್ಲಿ ವ್ಯಾಪಾರವನ್ನು ಸ್ಥಾಪಿಸುವ ಯಾರ ವಿರುದ್ಧವೂ ನಾವಿಲ್ಲ. ಆದರೆ, ಅಂತಹ ಜನರು ಸರ್ಕಾರದ ನಿಯಮಗಳನ್ನು ಅನುಸರಿಸಲು ಮತ್ತು ಜನರ ಭಾವನೆಗಳನ್ನು ಗೌರವಿಸಬೇಕೆಂದು ನಾವು ಬಯಸುತ್ತೇವೆ' ಎಂದು ಅವರು ಹೇಳಿದರು.

ವಾಣಿಜ್ಯ ಸಂಸ್ಥೆಗಳಿಗೆ ಶೇ 60 ರಷ್ಟು ಕನ್ನಡ ನಾಮಫಲಕ ಅಳವಡಿಸುವ ಮಾನದಂಡವನ್ನು ಜಾರಿಗೆ ತರಲು ಕಾರ್ಯಪಡೆ ರಚಿಸಲು ಸರ್ಕಾರ ಯೋಜಿಸುತ್ತಿದೆ ಎಂದು ಅವರು ಹೇಳಿದರು.

ಬೆಂಗಳೂರಿನ ಅಂಗಡಿ-ಮುಗ್ಗಟ್ಟು ಅಥವಾ ವಾಣಿಜ್ಯ ಸಂಸ್ಥೆಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆ ಬುಧವಾರ ನಡೆಸಿದ ಜಾಗೃತಿ ಮೆರವಣಿಗೆ ಕೆಲವು ಕಡೆಗಳಲ್ಲಿ ಅಹಿತಕರ ಘಟನೆಗೆ ಸಾಕ್ಷಿಯಾಯಿತು.  ಏರ್‌ಪೋರ್ಟ್ ರಸ್ತೆಯಲ್ಲಿ ಇಂಗ್ಲಿಷ್ ಫಲಗಳನ್ನು ಕಿತ್ತು ಹಾಕಿದರೆ, ಎಂಜಿ ರಸ್ತೆ ಸುತ್ತಮುತ್ತ ಕನ್ನಡೇತರ ನಾಮಫಲಕಗಳಿಗೆ ಮಸಿ ಬಳಿಯಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com