ಸಿಎಂ ಸಿದ್ದರಾಮಯ್ಯ
ರಾಜ್ಯ
ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ನನಗೆ ಆಹ್ವಾನ ಬಂದಿಲ್ಲ: ಸಿಎಂ ಸಿದ್ದರಾಮಯ್ಯ
ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ನನಗೆ ಇನ್ನೂ ಆಹ್ವಾನ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಕೊಪ್ಪಳ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ನನಗೆ ಇನ್ನೂ ಆಹ್ವಾನ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇಶದ ಹಲವಾರು ಪ್ರಮುಖ ವ್ಯಕ್ತಿಗಳು ಮತ್ತು ರಾಜಕೀಯ ನಾಯಕರನ್ನು ಈ ಮಹಾ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಿದೆ.
ಈ ಕುರಿತು ಇಂದು ಕೊಪ್ಪಳದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಇಂದಿನವರೆಗೂ ನನಗೆ ಯಾವುದೇ ಆಹ್ವಾನ ಬಂದಿಲ್ಲ, ಆಹ್ವಾನ ಬಂದ ನಂತರ ಆ ಬಗ್ಗೆ ಯೋಚಿಸುತ್ತೇನೆ ಎಂದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಶುಕ್ರವಾರ ಹೇಳಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ